ಬೆಂಗಳೂರು : ಮಳೆ, ಚಳಿಗೆ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 21ರಿಂದ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

RELATED ARTICLES  ರಾಜ್ಯ ಅಬಕಾರಿ ಇಲಾಖೆಯಲ್ಲಿ ಉಪ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಉತ್ತರ ಒಳನಾಡಿ ಕೆಲ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಆಗಲಿದೆ. ಶುಕ್ರವಾರದಿಂದ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

RELATED ARTICLES  ಅತ್ಯುತ್ತಮ ಶಿಕ್ಷಣಕ್ಕಾಗಿ ಮೊದಲ ಆಯ್ಕೆ ವಿಧಾತ್ರಿ ಅಕಾಡೆಮಿ.