ಗದಗ: ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದಲಿ ಗ್ರಾಮದಲ್ಲಿ ಗ್ರಾಮದಲ್ಲಿ ಅತಿಥಿ ಶಿಕ್ಷಕರೊಬ್ಬರು 4 ನೇ ತರಗತಿ ವಿದ್ಯಾರ್ಥಿಯನ್ನು ಶಾಲಾ ಆವರಣದಲ್ಲಿಯೇ ಹೊಡೆದು ಕೊಂದಿದ್ದಾನೆ. ಆರೋಪಿ ಶಿಕ್ಷಕ ತಲೆಮರೆಸಿಕೊಂಡಿದ್ದು, ಆತನನ್ನು ಬಂಧಿಸಲು ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.
ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದ ಈತ, ಮೂಲಗಳ ಪ್ರಕಾರ ಶಿಕ್ಷಕ ಶಾಲಾ ಆವರಣದಲ್ಲಿಯೇ ವಿದ್ಯಾರ್ಥಿಗೆ ಕಬ್ಬಿಣದ ರಾಡ್‌ನಂತಹ ವಸ್ತುವಿನಿಂದ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ. ಮೃತ ವಿದ್ಯಾರ್ಥಿಯನ್ನು ಭರತ್ ಎಂದು ಗುರುತಿಸಲಾಗಿದೆ. ಭರತ್ ಅವರ ತಾಯಿ, ಹಾಗೂ ಅದೇ ಕ್ಯಾಂಪಸ್‌ನಲ್ಲಿ ಶಿಕ್ಷಕಿಯಾಗಿರುವ ಗೀತಾ ಬಾರಕೇರಿ ಅವರು ಮಧ್ಯಪ್ರವೇಶಿಸಿ ಮುತ್ತಪ್ಪನನ್ನು ತಡೆಯಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಅತಿಥಿ ಶಿಕ್ಷಕ ಆಕೆಯ ಮೇಲೆಯೂ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.
ಹಲ್ಲೆ ಮಾಡುವುದನ್ನು ಬಿಡಿಸಲು ಹೋದ ಸಹ ಶಿಕ್ಷಕನ ಮೇಲೂ ಆರೋಪಿ ಶಿಕ್ಷಕ ಹಲ್ಲೆ ಮಾಡಿದ್ದಾನೆ. ಮಕ್ಕಳನ್ನು ಶಿಕ್ಷಕರು ಭಯಭೀತರಾದ ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸಿ ತಕ್ಷಣವೇ ಗ್ರಾಮಸ್ಥರನ್ನು ಸಹಾಯಕ್ಕೆ ಕರೆದಿದ್ದಾರೆ. ಗ್ರಾಮಸ್ಥರು ಬಂದ ನಂತರ ಅತಿಥಿ ಶಿಕ್ಷಕನ ಹುಚ್ಚಾಟಕ್ಕೆ ತೆರೆಬಿದ್ದು, ಆತ ಅಲ್ಲಿಂದ ಪರಾರಿಯಾಗಿದ್ದಾನೆ.
ತೀವ್ರವಾಗಿ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವಗೊಂಡ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಶಿಕ್ಷಕಿ ಗೀತಾ ಬಾರಕೇರಿ ಅವರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.