ಭಟ್ಕಳ : ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಪೂರ್ವ ಚಟುವಟಿಕೆಗಳು ಚುರುಕಾಗುತ್ತಿದ್ದು, ಬಿಜೆಪಿ ಪಕ್ಷ ಸಂಘಟನೆ ಹಾಗೂ ಚುನಾವಣಾ ತಂತ್ರವನ್ನು ಹೆಣೆಯಲು ಸಜ್ಜಾಗುತ್ತದೆ. ಅದಕ್ಕೆ ಪೂರಕವಾಗಿ ತಾಲೂಕಿನ ಮುರುಡೇಶ್ವರದಲ್ಲಿ ಹಮ್ಮಿಕೊಂಡಿರುವ ಬಿಜೆಪಿ ರಾಜ್ಯಪದಾಧಿಕಾರಿಗಳ ಸಭೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಗಮಿಸಿದ್ದು, ಸಭೆಗೆ ಚಾಲನೆ ನೀಡಿದರು. ಮುರುಡೇಶ್ವರದ ಆರ್ ಎನ್ ಎಸ್ ಸಭಾಂಗಣದಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ.
ಸಭೆಯಲ್ಲಿ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ರೂಪಾಲಿ ನಾಯ್ಕ, ದಿನಕರಶೆಟ್ಟಿ, ಸುನೀಲ್ ನಾಯ್ಕ, ರವಿಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಹಲವು ವಿಷಯಗಳ ಕುರಿತು ಚರ್ಚೆಯಾಗಲಿದ್ದು, ಚುನಾವಣಾ ಪೂರ್ವದ ಈ ಸಭೆ ಬಹಳ ಮಹತ್ವ ಪಡೆದುಕೊಂಡಿದೆ.