ಶ್ರೀನಗರ: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES  ಪ್ರೀತಿಯ ಪ್ರಧಾನಿಗೊಂದು ಬಹಿರಂಗ ಪತ್ರ.

ಇಬ್ಬರು ಭಯೋತ್ಪಾದಕರನ್ನು ಶೋಪಿಯಾನ್‌ನ ಲತೀಫ್ ಲೋನ್ ಮತ್ತು ಅನಂತನಾಗ್‌ನ ಉಮರ್ ನಜೀರ್ ಎಂದು ಗುರುತಿಸಲಾಗಿದೆ. ಕಾಶ್ಮೀರಿ ಪಂಡಿತ್ ಪುರಾಣ ಕೃಷ್ಣ ಭಟ್ ಹತ್ಯೆಯಲ್ಲಿ ಲತೀಫ್ ಲೋನ್ ಭಾಗಿಯಾಗಿದ್ದರೆ, ನೇಪಾಳದ ಟಿಲ್ ಬಹದ್ದೂರ್ ಥಾಪಾ ಹತ್ಯೆಯಲ್ಲಿ ಉಮರ್ ನಜೀರ್ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರ ಬಳಿಯಿದ್ದ ಎಕೆ 47 ರೈಫಲ್ ಹಾಗೂ ಎರಡು ಪಿಸ್ತೂಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

RELATED ARTICLES  ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕು: ದಲಿತ ಸಮುದಾಯದ ಆಗ್ರಹ.

ಸೇನೆ ಮತ್ತು ಪೊಲೀಸ್ ಪಡೆಗಳು ಕಾರ್ಯಪ್ರವೃತ್ತವಾಗಿದ್ದು, ಇಬ್ಬರಿಂದ ಮೂವರು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಎಂದು ನಂಬಲಾಗಿದೆ.