ಕಾರವಾರ : ಕುಮಟಾ ಹಾಗೂ ಸುತ್ತಮುತ್ತಲು ಹಲವಡೆ ಗಾಂಜಾ ಮಾರಾಟ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿದ್ದು ಇಂದೂ ಸಹ ಅಂತಹುದೇ ಪ್ರಕರಣ ಒಂದು ವರದಿಯಾಗಿದೆ. ರೈಲ್ವೇ ನಿಲ್ದಾಣದಲ್ಲಿ ಗಾಂಜಾ ಮಾರುತ್ತಿದ್ದ ಸಂದರ್ಭದಲ್ಲಿ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ ರೂ 12,5000ಮೌಲ್ಯದ 4KG 76 ಗ್ರಾಮ್ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾದ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಶಿರಸಿ ಶಾಂತಿನಗರದ ವಿನಾಯಕ್ (39), ಗಣೇಶ ನಗರದ ನಿಖಿಲ್ (26), ಭಟ್ಕಳದ ಸಮಿ ಅಬ್ಬಾಸ್ ಮಲ್ವಾ (40) ಬಂಧಿತ ಆರೋಪಿಗಳಾಗಿದ್ದು,ಕುಮಟಾ ರೈಲ್ವೇ ನಿಲ್ದಾಣ ಬಳಿ ಬೈಕ್ ನಲ್ಲಿ ಗಾಂಜಾ ಮಾರುತ್ತಿದ್ದ ವೇಳೆ ದಾಳಿ ನಡೆಸಿ ಬಂಧನ ಮಾಡಲಾಗಿದೆ. ಸಿಪಿಐ ತಿಮ್ಮಪ್ಪ ನಾಯ್ಕ, ಪಿಎಸ್‌ಐ ರವಿ ಗುಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.