ನ್ಯೂಸ್ ಡೆಸ್ಕ್ : ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ನವೆಂಬರ್ ತಿಂಗಳಲ್ಲಿ 37 ಲಕ್ಷಕ್ಕೂ ಅಧಿಕ ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ನವೆಂಬರ್ 01-30ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 37.16 ಲಕ್ಷ ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ವಾಟ್ಸ್​ಆ್ಯಪ್ ತಿಳಿಸಿದೆ.

ಅಕ್ಟೋಬರ್ ತಿಂಗಳಿಗೆ ಹೋಲಿಸಿದರೆ ಶೇ. 60 ರಷ್ಟು ಅಧಿಕ ಖಾತೆ ನವೆಂಬರ್​ನಲ್ಲಿ ನಿಷೇಧ ಮಾಡಲಾಗಿದೆ. ಈ ಹಿಂದೆ ಅಕ್ಟೋಬರ್​ ತಿಂಗಳಲ್ಲಿ ಕೂಡ ಭಾರತದಲ್ಲಿ 23 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿತ್ತು.

RELATED ARTICLES  ಬಹುಜನರ ಅಪೇಕ್ಷೆಯ ಮೇರೆಗೆ “ಮೆಗಾ ಫರ್ನಿಚರ್ ಮೇಳ” ಫೇ 10 ರ ವರೆಗೆ ವಿಸ್ತರಣೆ.

ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ. ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಈ ವರದಿಯಲ್ಲಿ ಸ್ವೀಕರಿಸಿದ ದೂರುಗಳು ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಬೇಕು.

RELATED ARTICLES  ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ರಕ್ಷಾ ಬಂಧನ (ರಾಖಿ) ಖರೀದಿ ಭರಾಟೆ.

ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, ವಾಟ್ಸ್​ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚಚಿನ ಗಮನ ಹರಿಸುತ್ತಿದೆ ಎಂದಿದ್ದಾರೆ. ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು.