ಕಾರವಾರ : ತಾಲೂಕಿನ ಹಾರವಾಡ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರೊಂದು ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಕುಮಟಾ ತಾಲೂಕಿನ ವನಳ್ಳಿ ನಿವಾಸಿ ಲೋಕೇಶ್ವರ ರಾಮಾ ಹರಿಕಂತ್ರ (46) ಮತ್ತು ಅವರ ಪತ್ನಿ ಸರಸ್ವತಿ ಲೋಕೇಶ್ವರ ಹರಿಕಂತ್ರ (41) ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ಸರಸ್ವತಿ ಅವರ ಆರೋಗ್ಯ ತಪಾಸಣೆಗೆ ಕಾರವಾರ ಜಿಲ್ಲಾ ಆಸ್ಪತ್ರೆಗೆ ತೆರಳಿ ಕುಮಟಾ ಕಡೆ ಮರಳಿ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಕಾರು ಅತಿ ವೇಗದಲ್ಲಿ ಬಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಅವರ ಎರಡೂ ಕಾಲು ಮತ್ತು ಬಲ ಕೈಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಅವರ ಪತ್ನಿ ಸರಸ್ವತಿ ಅವರ ಬಲ ಕಾಲಿಗೆ ಗಂಭೀರ ಮತ್ತು ತಲೆಗೆ ಸಾದಾ ಗಾಯಗಳಾಗಿವೆ.
ಕಾರು ಚಾಲಕನ ಅತಿ ವೇಗ ಮತ್ತು ನಿರ್ಲಕ್ಷದ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಗಾಯಾಳುಗಳನ್ನು ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.