ಕಾರವಾರ: ‘ಗೋವಾದ ನಿರಾಶ್ರಿತ ಕನ್ನಡಿಗರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು’ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಮಹಾಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು. ಗೋವಾದ ಬೈನಾ ಕಡಲತೀರಕ್ಕೆ ಮಂಗಳವಾರ ಭೇಟಿ ನೀಡಿದ ಅವರು, ಅಲ್ಲಿನ ನಿರಾಶ್ರಿತರ ಕನ್ನಡಿ ಗರ ಸಮಸ್ಯೆಯನ್ನು ಆಲಿಸಿದರು.

‘40 ವರ್ಷಗಳಿಂದ ವಾಸವಾಗಿದ್ದ ಕನ್ನಡಿಗರನ್ನು ಒಕ್ಕಲೆಬ್ಬಿಸಿ, ನಿರಾಶ್ರಿತರನ್ನಾಗಿ ಮಾಡುವ ಮೂಲಕ ಗೋವಾ ಸರ್ಕಾರದ ಅಮಾನವೀಯವಾಗಿ ನಡೆದುಕೊಂಡಿದೆ. ಯಾವುದೇ ನೋಟಿಸ್‌ ನೀಡದೇ ಮನೆಗಳನ್ನು ಹಾಗೂ ಇಲ್ಲಿನ ಬಸವ ಗುಡಿಯನ್ನು ಧ್ವಂಸಗೊಳಿಸಿರುವುದು ಖಂಡನೀಯ’ ಎಂದು ಕಿಡಿಕಾರಿದರು.

RELATED ARTICLES  ಭಟ್ಕಳ ಸಮೀಪ ಗ್ಯಾಸ್ ಟ್ಯಾಂಕರ್ ಪಲ್ಟಿ : ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿ

ಭೂಮಿ ನೀಡಲಿ: ‘ಇದೇ ಬೈನಾ ಕಡಲತೀರದಲ್ಲಿ 2014ರಲ್ಲಿ ಕನ್ನಡಿಗರ ಮನೆಗಳನ್ನು ನೆಲಸಮಗೊಳಿಸಿದ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರು ನಿರಾಶ್ರಿತರಿಗೆ ಭೂಮಿ ಒದಗಿಸುವುದಾಗಿ ಭರವಸೆ ನೀಡಿದ್ದರು. ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ ಹಾಗೂ ಆ ಜಾಗದಲ್ಲಿ ಕರ್ನಾಟಕ ಸರ್ಕಾರ ಮನೆ ನಿರ್ಮಿಸಿಕೊಡಬೇಕು’ ಎಂದು ಒತ್ತಾಯಿಸಿದರು.

RELATED ARTICLES  ವಿದ್ಯಾರ್ಥಿಗಳೇ ಗಮನಿಸಿ..: SSLC ಪ್ರಶ್ನೆ ಪತ್ರಿಕೆಯಲ್ಲಿ ಬಹುಮುಖ್ಯ ಬದಲಾವಣೆ..!

‘ಕೇಂದ್ರ ಗೃಹ ಸಚಿವರು ಮಧ್ಯ ಪ್ರವೇಶಿಸಿ, ಸಮಸ್ಯೆ ಬಗೆಹರಿಸುವಂತೆ ಕರ್ನಾಟಕ ಸರ್ಕಾರ ಒತ್ತಡ ಹೇರಬೇಕು. ಇಲ್ಲವಾದರೆ ಸರ್ಕಾರವೇ ಮಾನವೀಯ ಆಧಾರದ ಮೇಲೆ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸಿಕೊಡಬೇಕು’ ಎಂದು ಆಗ್ರಹಿಸಿದರು.