ಪುತ್ತೂರು: ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದಿಂದ ನಿಧನರಾಗಿದ್ದಾಳೆ. ಇಲ್ಲಿನ ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಕಾಲೇಜಿನ ವಿದ್ಯಾರ್ಥಿನಿ ಸಂಹಿತಾ ಅಕಾಲಿಕ ಮರಣಕ್ಕೆ ತುತ್ತಾದ ವಿದ್ಯಾರ್ಥಿನಿಯಾಗಿದ್ದಾಳೆ.
ಸುಳ್ಯ ತಾಲೂಕಿನ ಏನೆಕಲ್ಲು ಗ್ರಾಮದ ಮೇಲುಕಟ್ಟ ನಿವಾಸಿ ಸಾಯಿಕಿರಣ್ ಅವರ ಪುತ್ರಿಯಾದ ಸಂಹಿತಾ, ಕಂಪ್ಯೂಟರ್ ಸೈನ್ಸ್ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದರು.
ಮಾಡಾವು ನಿವಾಸಿ ಸಂಹಿತಾ ಅವರು ಅನಾರೋಗ್ಯದಿಂದಾಗಿ ಕಳೆದ ಎರಡು ದಿನಗಳಿಂದ ಕಾಲೇಜಿಗೆ ಹೋಗದೆ ರಜೆಯಲ್ಲಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಡಿ.23 ರಂದು ಆರೋಗ್ಯವಂತರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು.
ಇಂದು ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.