ತುಮಕೂರು: ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 5ನೇ ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದ್ದು, ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣ (ಫೇಲ್) ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ರುಪ್ಸಾ ಸಂಘಟನೆಯಿಂದ ಹಮ್ಮಿಕೊಂಡಿದ್ದಂತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಮೌಲ್ಯ ಮಾಪನ ಉದ್ದೇಶದಿಂದ ಪಬ್ಲಿಕ್ ಪರೀಕ್ಷೆಯಲ್ಲಿ ಮಾಡಲಾಗುತ್ತಿದೆ. ಈ ಪರೀಕ್ಷೆಯಲ್ಲಿ ಯಾರನ್ನೂ ಅನುತ್ತೀರ್ಣ ಮಾಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP ) ಆಧಾರದ ಮೇಲೆ ತರಗತಿಗಳನ್ನು ಪ್ರಾರಂಭಿಸಲಾಗುತ್ತದೆ. ಮೊದಲ ಹಂತದಲ್ಲಿ 500 ರಿಂದ 600 ಶಾಲೆಗಳಲ್ಲಿ ಎನ್ಇಪಿ ಶೈಕ್ಷಣಿಕ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಹೇಳಿದರು.