ಕುಮಟಾ: ರಾಷ್ಟ್ರೀಯ ಗಣಿತ ದಿನದ ಅಂಗವಾಗಿ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆಎಸ್‌ಸಿಎಸ್‌ಟಿ) ಇವರು ಡಿಸೆಂಬರ್‌ 19 ರಂದು ಆಯೋಜಿಸಿದ್ದ ವಿಭಾಗ ಮಟ್ಟದ ಗಣಿತ ವಿಷಯಕ್ಕೆ ಸಂಬಂಧಿತ ಒಗಟು ಸ್ಪರ್ಧೆಯಲ್ಲಿ ಇಲ್ಲಿನ ಕೊಂಕಣ ಎಜ್ಯುಕೇಶನ್‌ ಟ್ರಸ್ಟ್‌ನ ಸಿವಿಎಸ್‌ಕೆ ಪ್ರೌಢಶಾಲೆಯ 10ನೇ ವರ್ಗದ ವಿದ್ಯಾರ್ಥಿ ಕುಮಾರ ರುಚಿತ ಅರವಿಂದ ಗೌಡ ದ್ವಿತೀಯ ಸ್ಥಾನ ಪಡೆದು ಸಾಧನೆಗೈದಿದ್ದಾನೆ. ಶಾಲಾ ಆಡಳಿತ ಮಂಡಳಿ, ಶೈಕ್ಷಣಿಕ ಸಲಹೆಗಾರರು, ಮುಖ್ಯಾಧ್ಯಾಪಕಿಯರು, ಶಿಕ್ಷಕ ವೃಂದ, ಪಾಲಕರು ಈತನಿಗೆ ಶುಭ ಹಾರೈಸಿದ್ದಾರೆ.

RELATED ARTICLES  ಬೊಲೆರೊ ಪಿಕಪ್ ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ನಾಲ್ವರ ಬಂಧನ