ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಮುಂದಿನ 4 ದಿನ ರಾಜ್ಯದ ಹಲವೆಡೆ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಡಿಸೆಂಬರ್ 29ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಾದ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ರಾಮನಗರದಲ್ಲಿ ಮಳೆಯ ಸಾಧ್ಯತೆ ಹೆಚ್ಚಿದೆ ಎಂದು ಸೂಚಿಸಿದೆ.

RELATED ARTICLES  ಫೆ.3ರಂದು ಹೊನ್ನಾವರದಲ್ಲಿ ಉದ್ಯೋಗ ಮೇಳ: ಭಾಗವಹಿಸಲಿದೆ 20ಕ್ಕೂ ಹೆಚ್ಚು ಕಂಪನಿಗಳು.

ಡಿಸೆಂಬರ್ 27 ಮತ್ತು 28 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ ಕೊಡಗು, ತುಮಕೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

RELATED ARTICLES  ಫೊನ್ ನಂಬರ್ ಇಲ್ಲದೆಯೂ ಇನ್ನು ಮಾಡಬಹುದು ಆಡಿಯೋ, ವಿಡಿಯೋ ಕಾಲ್..! ವಾಟ್ಸಪ್ ಗೆ ಸೆಡ್ಡು ಹೊಡೆಯಲು ಬರ್ತಿದೆ ಹೊಸ ಆಪ್ : ಏನದು ಗೊತ್ತಾ?