ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. 63 ವರ್ಷದ ಅವರನ್ನು ಆಸ್ಪತ್ರೆಯ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿದ್ದಯ, ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಗೆ ದಾಖಲಾದ ಕಾರಣಗಳು ಇನ್ನೂ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಆದರೆ ಸಾಮಾನ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ಹಣಕಾಸು ಸಚಿವರು ರಾತ್ರಿ ಊಟದ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗುವ ಸಾಧ್ಯತೆಯಿದೆ.

ಭಾನುವಾರ ಸೀತಾರಾಮನ್ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ದೆಹಲಿಯ ‘ಸದೈವ್ ಅಟಲ್’ಗೆ ತೆರಳಿ ಪುಷ್ಪನಮನ ಸಲ್ಲಿಸಿದ್ದರು.

ಆರೋಗ್ಯ ಪರಿಸ್ಥಿತಿ ಗಂಭೀರವಾಗೇನೂ ಇಲ್ಲ. ವಾರ್ಷಿಕ ಸಾಮಾನ್ಯ ತಪಾಸಣೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್‌ ಮಾಡಿದೆ.