ಕುಮಟಾ : ರಾಷ್ಟ್ರೀಯ ಹೆದ್ದಾರಿ 66ರ ದುಂಡಕುಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಲಾರಿ ಟೈಯರ್ ಪಂಚರ್ ತೆಗೆಯುತ್ತಿದ್ದ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಮಟಾ ತಾಲೂಕಿನ ದುಂಡಕುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿಂತ ಲಾರಿಗೆ ಸರಕು ತುಂಬಿಕೊಂಡು ಹೋಗುತ್ತಿದ್ದಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಟೈಯರ್ ಪಂಚರ್ ತೆಗೆಯುತ್ತಿದ್ದ ಚಾಲಕನ ದೇಹ ಛಿದ್ರ ಛಿದ್ರವಾಗಿದೆ. ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES  ಶ್ರೀ ರಾಘವೇಂದ್ರ ಅಷ್ಟಾಕ್ಷರ ಸ್ತೋತ್ರಂ

ಘಟನೆಯಿಂದಾಗಿ ಸ್ಥಳದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಹಾಗೂ ಅಧಿಕಾರಿಗಳು ಮತ್ತು ಸ್ಥಳೀಯರ ಸಹಕಾರ ಪಡೆದು ಮುಂದಿನ ಎಲ್ಲಾ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗಿದೆ.

RELATED ARTICLES  ಬಂದ್ ಆಗಲ್ಲ ಶಿರಸಿ ಕುಮಟಾ ರಸ್ತೆ : ಖಡಕ್ ವಾರ್ನ ನೀಡಿದ ಮಂಕಾಳ ವೈದ್ಯ.