ಮುಂಡಗೋಡ: ಪತಿ- ಪತ್ನಿ ಬೈಕ್ ಮೇಲೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದು ಗಾಯಗೊಂಡು ಪತ್ನಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಗಳ್ಳಿ ಗ್ರಾಮದ ಉಮ್ಮರಸಾಬ ಹಾಗೂ ಬೀಬಿಜಾನ ಬೈಕ್ ಮೇಲೆ ಚಿಗಳ್ಳಿ ಗ್ರಾಮದಿಂದ ಮೂಡಸಾಲಿಗೆ ಹೋಗುತ್ತಿದ್ದರು. ಈ ವೇಳೆ ಉಮ್ಮರಸಾಬ ಬೈಕ್ ಮೇಲೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ಹಿಂಬದಿ ಕುಳಿತಿದ್ದ ಬೀಬಿಜಾನ ತಲೆಗೆ ಪೆಟ್ಟು ಬಿದ್ದು ಮೃತಪಟ್ಟಿದ್ದಾಳೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಉತ್ತರಕನ್ನಡದ ಪ್ರಮುಖ ಸುದ್ದಿಗಳು