ಭಟ್ಕಳ: ಹೊನ್ನಾವರ ಕಡೆಯಿಂದ ಬೈಂದೂರು ಕಡೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ತಾಲೂಕಿನ ಕಾಮಾಕ್ಷಿ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ತಾಂತ್ರಿಕ ಕಾರಣದಿಂದ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಲಾರಿ ಚಾಲಕ ಪಾರಾಗಿದ್ದಾನೆ. ಸರಕು ಸಾಗಿಸುತ್ತಿದ್ದ ಲಾರಿಯಲ್ಲಿ ತಾಂತ್ರಿಕ ದೋಷದ ಕಾರಣ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಲಾರಿ ಮುಂಭಾಗ ಸುಟ್ಟು ಕರಕಲಾಗಿದೆ. ಚಾಲಕ ಬೆಂಕಿ ಕಾಣಿಸಿಕೊಂಡ ಲಾರಿಯಿಂದ ಇಳಿದು ಬೆಂಕಿ ನಂದಿಸಲು ಪ್ರಯತ್ನಪಟ್ಟಿದ್ದು, ಜೊತೆಗೆ ಕಾಮಾಕ್ಷಿ ಪೆಟ್ರೋಲ್ ಬಂಕ್ ಸಿಬ್ಬಂದಿ ಸಹ ಕೈಜೋಡಿಸಿದ್ದರು. ನಂತರ ಅಗ್ನಿಶಾಮಕ ದಳದವರು ಹಾಗೂ ನಗರ ಠಾಣೆ ಪೊಲೀಸರು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.

RELATED ARTICLES  ಶೈಕ್ಷಣಿಕ ನಾಯಕತ್ವ ಗುಣಾತ್ಮಕ ಶಿಕ್ಷಣಕ್ಕೆ ಬುನಾದಿ