ಕೋಲ್ಕತಾ: ಪಶ್ಚಿಮ ಬಂಗಾಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಜಾರ್ಖಂಡ್ ಮೂಲದ ನಟಿ ರಿಯಾ ಕುಮಾರಿ ಗುಂಡಿನ ದಾಳಿಯಲ್ಲಿ ದಾರುಣ ಅಂತ್ಯ ಕಂಡಿರುವ ಭೀಕರ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ. ಐಸಿಸಿ ವರ್ಷದ ಉದಯೋನ್ಮುಖ ಆಟಗಾರ ಪ್ರಶಸ್ತಿ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತೀಯ ನಟಿ ರಿಯಾ ಪತಿ ಪ್ರಕಾಶ್ ಕುಮಾರ್ ಹೇಳಿಕೆ ಪ್ರಕಾರ, ರಿಯಾ ಕೋಲ್ಕತಾದಿಂದ ರಾಂಚಿಗೆ ಪ್ರಯಾಣಿಸುತ್ತಿದ್ದ ವೇಳೆ ಬುಧವಾರ 6ಗಂಟೆಗೆ ಈ ಘಟನೆ ನಡೆದಿರುವುದಾಗಿ ತಿಳಿಸಿದ್ದಾರೆ. ಘಟನೆ ವೇಳೆ ಪತಿ ಪ್ರಕಾಶ್ ಕುಮಾರ್ ವಾಹನ ಚಲಾಯಿಸುತ್ತಿದ್ದು, ದಂಪತಿಗೆ ಮೂರು ವರ್ಷದ ಮಗಳಿದ್ದಾಳೆ ಎಂದು ವರದಿ ತಿಳಿಸಿದೆ.

RELATED ARTICLES  ಉತ್ತರಕನ್ನಡದಲ್ಲಿ ಕೊರೋನಾ ಕಾಟ : ಜನರೇ ಹುಷಾರ್..!

ಪ್ರಕಾಶ್ ಪೊಲೀಸರಿಗೆ ನೀಡಿರುವ ಹೇಳಿಕೆ ಪ್ರಕಾರ, ಹೌರಾ ಜಿಲ್ಲೆಯ ಬಗ್ನಾನ್ ಪ್ರದೇಶದ ಮಹಿಶ್ರೇಖಾ ಸೇತುವೆ ಸಮೀಪ ತಮ್ಮ ಕಾರನ್ನು ನಿಲ್ಲಿಸಿದ್ದು, ಈ ಸಂದರ್ಭದಲ್ಲಿ ಮೂವರು ಆಗಂತುಕರು ಶಸ್ತ್ರಾಸ್ತ್ರದೊಂದಿಗೆ ದರೋಡೆ ಮಾಡುವ ಉದ್ದೇಶದಿಂದ ದಾಳಿ ನಡೆಸಿದ್ದರು.

ಈ ಸಂದರ್ಭದಲ್ಲಿ ನಾವು ಪ್ರತಿರೋಧ ಒಡ್ಡಿದ್ದು, ಆಗ ಒಬ್ಬಾತ ರಿಯಾ ಮೇಲೆ ಪಾಯಿಂಟ್ ಬ್ಲ್ಯಾಂಕ್ ರೇಂಜ್ ನಿಂದ ಗುಂಡಿಟ್ಟಿದ್ದ. ಆಕೆ ರಕ್ತದ ಮಡುವಿನಲ್ಲೇ ಕೊನೆಯುಸಿರೆಳೆದಿದ್ದಳು ಎಂದು ಪ್ರಕಾಶ್ ಮಾಹಿತಿ ನೀಡಿರುವುದಾಗಿ ವರದಿ ವಿವರಿಸಿದೆ.

RELATED ARTICLES  ಯಡಿಯೂರಪ್ಪ ತಮ್ಮ ಹಿಂದಿನ ಅವಧಿಯನ್ನು ತಿರುಗಿನೋಡಿಕೊಳ್ಳಲಿ : ಡಿಸಿಎಂ ಪರಮೇಶ್ವರ್

ಘಟನೆ ನಡೆದ ಕೂಡಲೇ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಕೂಡಲೇ ಸ್ಥಳೀಯರಿಗೆ ಮಾಹಿತಿ ನೀಡಿದ್ದೆ ಎಂದು ಪ್ರಕಾಶ್ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಕೂಡಲೇ ರಿಯಾಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಕೆ ಸಾವನ್ನಪ್ಪಿರುವುದಾಗಿ ತಿಳಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಟಿ ರಿಯಾ ಪತಿ ಪ್ರಕಾಶ್ ಕುಮಾರ್ ಅವರನ್ನು ವಿಚಾರಣೆಗೊಳಪಡಿಸಿರುವುದಾಗಿ ವರದಿ ತಿಳಿಸಿದೆ.

Source : Udayavani