ಹೊನ್ನಾವರ: ತಾಲೂಕಿನ ಕಾಸರಕೋಡ ಶ್ಯಾನಭಾಗ ಹೋಟೆಲ್ ಎದುರುಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ಎಂದು ಹೋದ ಸಮಯದಲ್ಲಿ ಖದೀಮರು ಬೈಕ್‌ನಲ್ಲಿದ್ದ ಮೊಬೈಲ್ ಫೋನ್ ಕದ್ದು ಪರಾರಿಯಾಗಿದ್ದರು ಎಂದು ತಿಳಿದುಬಂದಿದೆ.

RELATED ARTICLES  ಭಾರತದ ಭವಿಷ್ಯ ಹಳ್ಳಿಗಳಲ್ಲಿ ಇದೆ: ಸೀತಾರಾಮ ಕೇದಿಲಾಯ

ಬೈಕ್‌ನಲ್ಲಿದ್ದ ಮೊಬೈಲ್ ಫೋನ್ ಕಳೆದುಕೊಂಡವರು ಮಂಕಿಯಲ್ಲಿ ಬ್ಯಾಂಕ್ ಮ್ಯಾನೆಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಈ ವಿಷಯ ತಿಳಿಯುತ್ತಿದ್ದಂತೆ ಕಾರ್ಯಪ್ರವೃತ್ತರಾದ ಹೊನ್ನಾವರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯಲ್ಲಿ ನಾಕಾ ಬಂಧಿ ಮಾಡಿ ಗೇರುಸೊಪ್ಪ ಚೆಕ್ ಪೋಸ್ಟ್‌ನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯುವ ಮೂಲಕ ಪ್ರಕರಣವನ್ನು ಭೇದಿಸುವಲ್ಲಿ ಯಶ್ವಸಿಯಾಗಿದ್ದಾರೆ. ಹೊನ್ನಾವರದ ಸಿ.ಪಿ.ಐ ಶ್ರೀಧರ ಎಸ್.ಆರ್ ನೇತೃತ್ವದ ತಂಡದ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗುತ್ತಿದೆ ಎಂದು ವರದಿಯಾಗಿದೆ.

RELATED ARTICLES  ಇನ್ಸ್ಪೈರ್ ಅವಾರ್ಡ್ : ಹೆಗಡೆಯ ರೇವತಿ ಮುಕ್ರಿ ರಾಷ್ಟ್ರಮಟ್ಟಕ್ಕೆ ಆಯ್ಕೆ