Satwadhara News

ಮೋದಿ ಅವರ ತಾಯಿ, ಶತಾಯುಷಿ ಹೀರಾಬೆನ್ ಮೋದಿ ಇನ್ನಿಲ್ಲ.

ಅಹಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ, ಶತಾಯುಷಿ ಹೀರಾಬೆನ್ ಮೋದಿಯವರು ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಿಧನರಾದರು. ಹೀರಾಬೆನ್ ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು  ನಗರದ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದರೆ.

ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿ, ಆಶೀರ್ವಾದ ಪಡೆದಿದ್ದರು. ತಾಯಿಯ ಪಾದ ತೊಳೆದು ಪೂಜಿಸಿದ್ದರು.

ಅಮ್ಮನಲ್ಲಿ ನಾನು ತ್ರಿಮೂರ್ತಿಗಳನ್ನು ಕಂಡಿದ್ದೇನೆ. ಅವರ ಜೀವನವು ತಪಸ್ವಿಯ ಪ್ರಯಾಣವಾಗಿತ್ತು. ನಿಷ್ಕಾಮ ಕರ್ಮಯೋಗಿಯ ಜೀವನ ಮತ್ತು ಮೌಲ್ಯಗಳಿಗೆ ಬದ್ಧವಾದ ಬದುಕಿನ ಸಂಕೇತವಾಗಿದ್ದರು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಹೀರಾಬೆನ್‌ ಅವರನ್ನು ಅಹಮದಾಬಾದ್‌ನ ಯು.ಎನ್.ಮೆಹ್ತಾ ಇನ್‌ಸ್ಟಿಟ್ಯೂಟ್‌ ಆಫ್‌ ಕಾರ್ಡಿಯಾಲಜಿ ಆ್ಯಂಡ್‌ ರೀಸರ್ಚ್‌ ಸೆಂಟರ್‌ ಆಸ್ಪತ್ರೆಗೆ ಬುಧವಾರ ದಾಖಲಿಸಲಾಗಿತ್ತು.

‘ಶ್ರೀಮತಿ ಹೀರಾಬೆನ್‌ ಮೋದಿ ಅವರು 2022ರ ಡಿಸೆಂಬರ್‌ 30ರಂದು ಬೆಳಗಿನ ಜಾವ 3.39ಕ್ಕೆ ನಿಧನರಾಗಿದ್ದಾರೆ’ ಎಂದು ಆಸ್ಪತ್ರೆಯು ಪ್ರಕಟಣೆಯಲ್ಲಿ ತಿಳಿಸಿದೆ.

Comments

Leave a Reply

Your email address will not be published. Required fields are marked *