ಬೆಂಗಳೂರು: ರಾಜ್ಯದ ಐಪಿಎಸ್ ಅಧಿಕಾರಿ ಆರ್. ದಿಲೀಪ್ (53) ಅವರು ಅನಾರೋಗ್ಯದಿಂದಾಗಿ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ದುರಂತವೆಂದರೆ ಡಿಐಜಿ ಆಗಿದ್ದ ಅವರು ನಾಳೆ ಐ.ಜಿಯಾಗಿ ಪದೋನ್ನತಿ ಹೊಂದುವವರಿದ್ದರು. ಸಿಐಡಿ ಆರ್ಥಿಕ ವಿಭಾಗದ ಡಿಐಜಿಪಿ ಆಗಿ ಕೆಲಸ ಮಾಡುತ್ತಿದ್ದ ಇವರು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು.

RELATED ARTICLES  ಟಿಪ್ಪರ್ ನಲ್ಲಿಯೇ ಚಾಲಕ ಸಾವು

ಬಿಇ ಪದವೀಧರರಾಗಿದ್ದ ದಿಲೀಪ್ ಅವರು 2005ರಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಧಾರವಾಡ, ಉತ್ತರ ಕನ್ನಡ ಹಾಗೂ ಹಲವು ಜಿಲ್ಲೆಗಳ ಎಸ್ಪಿ ಆಗಿದ್ದರು. ಹುಬ್ಬಳ್ಳಿ–ಧಾರವಾಡ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು.

RELATED ARTICLES  ಅಪರಿಚಿತ ಮಹಿಳೆಯ ಶವದ ಪ್ರಕರಣ : ಮರ್ಡರ್ ಮಾಡಿದ್ದವರು ಅರೆಸ್ಟ್.