ಶಿರಸಿ: ಶಿರಸಿ ಹುಬ್ಬಳ್ಳಿ ರಸ್ತೆಯ ಹುಡೇಲಕೊಪ್ಪದ ಬಳಿ ಕೆ.ಎಸ್.ಆರ್.ಟಿ.ಸಿ. ಬಸ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಶಿರಸಿಯಿಂದ ಹುಬ್ಬಳ್ಳಿ ಕಡೆ ಹೊರಟಿದ್ದ KSRTC ಬಸ್ ಎದುರಿನಿಂದ ಬಂದ ಬಸ್ ತಪ್ಪಿಸಲು‌ ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಬಸ್ ಮೇಲೆ ಬಿದ್ದಿದೆ. ಬಸ್’ನಲ್ಲಿ 25 ಮಂದಿ‌ ಪ್ರಯಾಣಿಕರು ಪ್ರಯಾಣಿಸುತ್ತಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ‌ ಸ್ಥಳಕ್ಕೆ ಬನವಾಸಿ ಪೋಲಿಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

RELATED ARTICLES  ಸಂಕಟ ನಾಶನ ಗಣೇಶ ಸ್ತೋತ್ರಂ