ನಾಡಿನ ಪ್ರಸಿದ್ಧ ವಾಗ್ಮಿ, ಉಪನ್ಯಾಸಕಾರರು, ಅಂಕಣಕಾರರು, ಅಪರೂಪದ ಸಂತರು, ಅನನ್ಯ ಜ್ಞಾನಯೋಗಿ ಆಗಿರುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ(82) ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದ ಬಳಿಕ ಲಿಂಗೈಕ್ಯರಾಗಿದ್ದಾರೆ. ಉತ್ತರ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರಪ್ರದೇಶದ ಭಕ್ತರು ಶ್ರೀಗಳನ್ನು ನಡೆದಾಡುವ ದೇವರು, ಎರಡನೇ ವಿವೇಕಾನಂದ ಎಂದು ಕರೆಯುತ್ತಾರೆ.

ಬರಿಗೈ ಸಂತನ ಬಗ್ಗೆ ಒಂದಿಷ್ಟು

ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಾಸು ಮಾಡಿದರು. ಎಂ.ಎ. ಪದವಿಯ ಅಭ್ಯಾಸದ ಸಮಯದಲ್ಲಿ ಶ್ರೀ ಸಿದ್ಧೇಶ್ವರರರು ಕೊಲ್ಹಾಪುರದಲ್ಲಿ ಶ್ರೀ ವಿಜಯ ಪಾಟೀಲರ ಮನೆಯಲ್ಲಿ ವಾಸವಿದ್ದರು. ಆ ಅವಧಿಯಲ್ಲಿಯೇ ತಮ್ಮ ಗುರುಗಳಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ “ಸಿದ್ದಾಂತ ಶಿಖಾಮಣಿ “ಎಂಬ ಪುಸ್ತಕ ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು.ಆಗ ಅವರಿಗೆ ಕೇವಲ 19 ವರ್ಷ ಮಾತ್ರ ಆಗಿತ್ತೆಂಬುದು ಗಮನಾರ್ಹ. ಸಿದ್ದೇಶ್ವರರ ಮಾತು ಎಂದರೆ ಮಲ್ಲಿಕಾರ್ಜುನ ಸ್ವಾಮಿಗಳಿಗೆ ಬಲು ಪ್ರೀತಿ. ಆತ ಮಹಾ ಬುದ್ದಿವಂತ, ಆಧ್ಯಾತ್ಮಿಕದಂತೆ ಲೌಕಿಕ ವಿಷಯಗಳಲ್ಲೂ ವಿಶೇಷ ಪರಿಜ್ಞಾನವಿದೆ. ಮುಂದೆ ಜಗತ್ತಿಗೇ ದೊಡ್ಡವನಾಗುತ್ತಾನೆ ಎಂದು ವಿಶ್ವಾಸದಿಂದ ಎಲ್ಲರೆದುರು ಹೇಳುತ್ತಿದ್ದರು. ಸ್ನಾತಕೋತ್ತರ ಪದವಿ ಪಡೆದು ವಿಜಯಪುರಕ್ಕೆ ಹಿಂದಿರುಗಿದ ನಂತರ ಸಿದ್ದೇಶ್ವರರಿಗೆ ಭಗವದ್ಗೀತೆಯ ಬಗ್ಗೆ, ಉಪನಿಷತ್ತುಗಳ ಬಗ್ಗೆ ಮಲ್ಲಿಕಾರ್ಜುನ ಸ್ವಾಮಿಗಳು ವ್ಯಾಖ್ಯಾನವನ್ನು ನೀಡಿ ಅವರ ಜ್ಙಾನದಿಗಂತವನ್ನು ವಿಸೃತಗೊಳಿಸಿದರು. ಪೂಜ್ಯರು ಉಪನಿಷತ್ತುಗಳು, ಭಗವದ್ಗೀತೆ,ಯೋಗಸೂತ್ರ,ವಚನಶಾಸ್ತ್ರ ಮುಂತಾದ ವಿಷಯಗಳ ಬಗೆಗೆ ತಾವು ಹೇಗೆ ಗುರು ಮುಖೇನ ಕಲಿತ ಜ್ಙಾನವನ್ನು ಬಳಸಿಕೊಂಡು ಬೋದಪ್ರದ ಪ್ರವಚನಗಳನ್ನು ನೀಡುತ್ತಿದ್ದಾರೆ. ಗಹನವಾದ ವೇದಾಂತ ತತ್ವಗಳನ್ನು ಅತ್ಯಂತ ಸರಳವಾಗಿ ಜನಮಾನಸದಲ್ಲಿ ಉಳಿಯುವಂತೆ ವಿವರಿಸುವುದೇ ಅವರ ವೈಶಿಷ್ಟ್ಯ.

ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ, ವಿಜಯಪುರದ ಜೀವಂತ ದೇವರು ಎಂದು ಪ್ರಸಿದ್ಧರಾದ ಶ್ರೀ ಸಿದ್ದೇಶ್ವರ ಸ್ವಾಮಿಜಿಯು ದೈವಭಕ್ತಿ ಎಂಬ ನೈಜ ಮತ್ತು ನೇರ ಉದಾಹರಣೆಯಾಗಿದೆ. ಅವರ ಭಾಷಣಗಳು ಪ್ರತಿಯೊಬ್ಬರ ಜೀವನದಲ್ಲಿ ಅದ್ಭುತ ರೂಪಾಂತರವನ್ನು ತರುತ್ತವೆ ಮತ್ತು ಅಂತಿಮವಾಗಿ ಶಾಂತಿಯುತ ಮತ್ತು ಸಂತೋಷದ ಜೀವನಕ್ಕೆ ಕಾರಣವಾಗುತ್ತದೆ. ಮಾನವರು ಜೀವಾಧಾರಕರಾಗಿದ್ದು, ವಯಸ್ಸಿನ ಕೆಳಗೆ ದೈವಿಕರಾಗಿದ್ದಾರೆ. ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಜೀವಂತ ದೇವರಿಗೆ ಹೋಲಿಸಬಹುದಾದ ಮಾನವರಲ್ಲಿ ಒಬ್ಬರು. ಅವರ ಗುಣಗಳನ್ನು ವಿವರಿಸುವಲ್ಲಿ ಪದಗಳು ಕಡಿಮೆಯಾಗಬಹುದು. ಅವರ ಅನಿಸಿಕೆಗಳನ್ನು ಅನಕ್ಷರಸ್ಥರಿಂದಲೂ ಚೆನ್ನಾಗಿ ಅರ್ಥಪೂರ್ಣವಾಗಿ ಅರ್ಥೈಸಿಕೊಳ್ಳಬಹುದು. ಅವರು ಬಹಳ ಅರ್ಥಮಾಡಿಕೊಳ್ಳುವ ಮತ್ತು ಆನಂದಿಸುವ ರೀತಿಯಲ್ಲಿ ಬಹಳ ಕಠಿಣ ವಿಷಯಗಳನ್ನು ಬೋಧಿಸುತ್ತಾರೆ. ಉತ್ತರ ಕರ್ನಾಟಕದ ಪ್ರತಿಯೊಬ್ಬ ವ್ಯಕ್ತಿಗೂ ಮತ್ತು ಸ್ವಾಮೀಜಿಯವರು ವರ್ಷಾದ್ಯಂತ ಪ್ರಯಾಣಿಸಿರುವ ಸ್ಥಳಗಳಾದ್ಯಂತ ಮತ್ತು ಅವರ ವೀಡಿಯೊಗಳನ್ನು ಆನ್ಲೈನ್ನಲ್ಲಿ ಅವರು ಪ್ರಪಂಚದಾದ್ಯಂತ ಪ್ರಸಿದ್ಧ ವ್ಯಕ್ತಿಯಾಗಿದ್ದಾರೆ. ಅವನ ಉಪಸ್ಥಿತಿಯಲ್ಲಿ ಅವನ ಪ್ರಾಮುಖ್ಯತೆಯನ್ನು ಮಾತ್ರ ತಿಳಿಯಬಹುದಾಗಿದೆ. ಅವರು ಕರ್ನಾಟಕದ ವಿಜಯಜಪುರದ ಜ್ಞಾನ ಯೋಗಶ್ರಮದ ಸಂಸ್ಥಾಪಕರಾಗಿದ್ದಾರೆ. ತನ್ನ ಪದಗಳ ಮೂಲಕ ಮತ್ತು ಸಂತೋಷದಿಂದ ಸಾವಿರಾರು ಜನರ ಜೀವನವನ್ನು ಮಾಡುವ ಶ್ರೇಯ ಅವರಿಗೆ ಸಲ್ಲುತ್ತದೆ.

RELATED ARTICLES  ಮಂಗಳೂರಿನಲ್ಲಿ ರ್ಯಾಲಿ ಬಿಸಿ ಏರುತ್ತಿದೆ!

ನಿಸ್ವಾರ್ಥ ಸೇವೆ, ಮಮಕಾರಗಳಿಲ್ಲದೆ, ಯಾರ ಹಂಗಿಗೂ ಒಳಗಾಗದೆ ಸರ್ವಜನರಿಂದಲೂ ಪ್ರೀತಿ, ವಿಶ್ವಾಸದ ಆಶ್ರಯತಾಣವಾಗಿ ಬೆಳೆಯಿತು. ಪೂಜ್ಯ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಪ್ರವಚನದ ಮೂಲಕ ಜನರಲ್ಲಿ ಜ್ಞಾನದ ಜ್ಯೋತಿಯನ್ನು ಬೆಳಗುತ್ತಿದ್ದರು. ಕರ್ನಾಟಕವಲ್ಲದೆ ಮಹಾರಾಷ್ಟ್ರದ ಪ್ರಮುಖ ನಗರಗಳಲ್ಲಿ ತಿಂಗಳುಗಟ್ಟಲೆ ಪ್ರವಚನ ನೀಡುತ್ತಿದ್ದರು. ಇವರ ಗಾಢ ಪ್ರಭಾವ ಸುತ್ತಮುತ್ತಲ ಜನರ ಮೇಲೆ ಉಂಟಾಗಿ ಕ್ರಮೇಣ ಶ್ರೀಗಳು ಗ್ರಾಮೀಣ ಪ್ರದೇಶದ ಮಕ್ಕಳು ವಿದ್ಯೆಗಾಗಿ ಕಷ್ಟಪಡುತ್ತಿದ್ದುದನ್ನು ಗಮನಿಸಿ ಅವರಿಗಾಗಿ ವಿದ್ಯಾಸಂಸ್ಥೆಗಳನ್ನು ಪ್ರಾರಂಭಿಸಿ ಅವರಿಗೆ ಊಟ, ವಸತಿಗಳಿಗೆ ವ್ಯವಸ್ಥೆ ಮಾಡಿದರು. ಇದರಿಂದಾಗಿ ಸಾವಿರಾರು ಮಕ್ಕಳು ವಿದ್ಯಾವಂತರಾದರು. ಹಾಗೆ ವಿದ್ಯೆ ಕಲಿಯಲು ಬಂದ ಸಾವಿರಾರು ಮಕ್ಕಳಲ್ಲಿ ಶ್ರೀ ಸಿದ್ದೇಶ್ವರರೂ ಒಬ್ಬರು.

ವಿಜಯಪುರ ಜ್ಞಾನಯೋಗಾಶ್ರಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಶ್ರೀ ಸಿದ್ಧೇಶ್ವರರು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬರುತ್ತಿದ್ದಾರೆ. ಸಿದ್ದೇಶ್ವರರ ಪ್ರವಚನ ಕೇಳಿದವರು ಅದರಲ್ಲೇ ಅನುರಕ್ತರಾಗಿ ಬಿಡುತ್ತಾರೆ. ಅವರ ಪ್ರವಚನ ಕಾರ್ಯಕ್ರಮ ಎಲ್ಲಿ ಏರ್ಪಡಿಸಿದರೂ ಸಹ ಅಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುತ್ತಾರೆ.. ಒಂದು ಗಂಟೆಯ ಅವರ ಪ್ರವಚನದುದ್ದಕ್ಕೂ ಸೇರಿದ ಅಷ್ಟು ತುಂಬು ತನ್ಮಯತೆಯಿಂದ ಕುಳಿತಿರುತ್ತಾರೆ. ಸೂಜಿಗಲ್ಲಿನಂತಹ ಸೆಳೆತ, ಅವರು ಭಾಷೆ,ಧಾಟಿ, ಪ್ರದಪ್ರಯೋಗ,ಉದಾಹಣೆಗಳ ಮೂಲಕ ಪ್ರಚಲಿತ ಸಂಗತಿಗಳನ್ನು ಸಮ್ಮಿಳಿತಗೊಳಿಸುವರು. ಜೊತೆಗೆ ಕಲ್ಲು,ಮಣ್ಣು,ಗಿಡ, ಮರ,ಹೂ,ಹಕ್ಕು, ಪಕ್ಷಿ,ಪ್ರಾಣಿಗಳಲ್ಲಿ ಜೀವಚೈತನ್ಯವಿದೆ ಎಂಬುದನ್ನು ಅವರು ವಿವರಿಸುವ ರೀತಿ ಅದ್ಬುತವಾದುದು. ತಮ್ಮ ಗುರುಗಳು ಸ್ಥಾಪಿಸಿದ ನೂರಾರು ವಿದ್ಯಾ ಸಂಸ್ಥೆಗಳನ್ನು ಸಿದ್ದೇಶ್ವರರು ಮುಂದುವರಿಸಿಕೊಂಡು ಬರುತ್ತಿದ್ದರೂ ಅವರ ಯಾವ ಸಂಸ್ಥೆಗಳಿಗೂ ಆಶ್ರಮದ ಹೆಸರಾಗಲಿ, ಅವರ ಹೆಸರಾಗಲಿ ಇರುವುದಿಲ್ಲ ಎಂದರೆ ಆಶ್ಚರ್ಯವಲ್ಲವೆ? ಕೆರೆಯ ನೀರನ್ನು ಕೆರೆಗೆ ಚೆಲ್ಲಿ. ಎಂಬ ದಾಸ ವಾಣಿಯಂತೆ ನನ್ನದೇನಿದೆ,ಎಲ್ಲವೂ ಭಗವಂತನದು,ಇಲ್ಲಿರುವ ಪ್ರತಿಯೊಬ್ಬ ಮನುಷ್ಯನೂ ದೇವರು.ಎಲ್ಲರಲ್ಲೂ ದೇವರನ್ನು ಕಾಣಬೇಕು. ನಾನು ನನ್ನದೆಂಬ ಮಮಕಾರ ಸಲ್ಲದು. ಇಹಪರ ಎರಡೂ ಒಂದೆ ಎಂದು ಸಾರುತ್ತ ಅದರಂತೆ ನಡೆಯುತ್ತ ಇರುವ ಅಪರೂಪದ ಯೋಗಿಗಳು ಶ್ರೀ ಸಿದ್ದೇಶ್ವರರು.

ಅವರ ಉಪನ್ಯಾಸ ಸರಣಿಯ “ಬದುಕುವದು ಹೇಗೆ,” ನಾವು ಹೇಗೆ ಬದುಕಬೇಕು / ದಾರಿ ಮಾಡಿಕೊಳ್ಳಬೇಕು “ಲಕ್ಷಾಂತರ ಭಾರತೀಯರನ್ನು ರೂಪಾಂತರಿಸಿದೆ. ಜೀವನದಲ್ಲಿ ಸಂತೃಪ್ತಿ ಮತ್ತು ಸಂತೋಷದ ಬಗ್ಗೆ ಪ್ರಾಯೋಗಿಕ ಪಾಠಗಳನ್ನು ಜನರು ಮೆಚ್ಚಿದ್ದಾರೆ. ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಲಮ ಪ್ರಭುನ ವಚನಗಳ ಮೇಲೆ ಅಧಿಕೃತ ಭಾಷಣಕಾರರಾಗಿದ್ದಾರೆ. ಅವರು ವಚನಗಳ ಬಗ್ಗೆ ಹೊಸ ಬೆಳಕನ್ನು ಎಸೆದಿದ್ದಾರೆ. ವಿಶ್ವದ ತತ್ವಜ್ಞಾನಿಗಳ ಹೋಲಿಕೆಯು ಒಂದು ನಿರ್ದಿಷ್ಟ ವಿಷಯದ ದೃಷ್ಟಿಕೋನಕ್ಕೆ ಒಳಪಡಿಸಿದಾಗ ಅವರ ಉಪನ್ಯಾಸದ ಅತ್ಯುತ್ತಮ ಹೊರಬಂದಿದೆ. ಶ್ರೀ ಸಿದ್ದೇಶ್ವರ ಸ್ವಾಮಿಜಿಯವರು ಸರಳವಾದ ಸ್ಪೂರ್ತಿದಾಯಕ ಜೀವನ ಶೈಲಿಯನ್ನು ಹೊಂದಿದ್ದಾರೆ. ಲೀಡ್ನ ನೆಮ್ಮದಿಯ ಜೀವನವು ಉದಾಹರಣೆಗೆ! ತತ್ವಜ್ಞಾನಿ, ಆಲೋಚಕ ಸ್ವಾಮಿಜಿ ಪ್ರಪಂಚದಾದ್ಯಂತ ಆಧ್ಯಾತ್ಮಿಕ ಪ್ರವಚನಗಳನ್ನು ವಿತರಿಸಿದ್ದಾರೆ. ಅವರು ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರು ಆಧ್ಯಾತ್ಮಿಕತೆಗೆ ಮೀಸಲಿಟ್ಟಿದ್ದಾರೆ ಮತ್ತು ಭಾರತದ ಸಂತರು ಮತ್ತು ಸಿಯರ್ಸ್ ಕೃತಿಗಳ ಆಧಾರದ ಮೇಲೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ವೇದಾಂತ, ಗೀತಾ, ಯೋಗಸೂತ್ರ, ವಚನಗಳ ಕುರಿತಾದ ಶ್ರೀ ಸ್ವಾಮಿಜಿಯವರ ಉಪನ್ಯಾಸಗಳು ಅವುಗಳ ಮೂಲತೆ, ಚಿಂತನೆ, ಅಭಿವ್ಯಕ್ತಿ ಮತ್ತು ಚಿಂತನೆಗಾಗಿ ಹೆಸರುವಾಸಿಯಾಗಿದೆ. ಶ್ರೀ ಸ್ವಾಮೀಜಿ ಅವರು ತಮ್ಮ ಪಂಥಜಿಯವರ “ಪಥಜಲಿಯ ಯೋಗಶಾತ್ರ” ವನ್ನು ಮಹಾನ್ ಪಾಂಡಿತ್ಯಪೂರ್ಣ ಪಾಂಡಿತ್ಯದೊಂದಿಗೆ ಸಂಪಾದಿಸಿದ್ದಾರೆ. ಶ್ರೀ ಸಿದ್ಧೇಶ್ವರ ಸ್ವಾಮಿಜಿಯವರ ಸರಳತೆ, ಯೋಗದ ಮನೋಭಾವಗಳು, ಸಹಾನುಭೂತಿ, ಆಧ್ಯಾತ್ಮಿಕ ಸಮಸ್ಯೆಗಳಿಗೆ ಸೃಜನಶೀಲ ವಿಧಾನ ಮತ್ತು ಅವರ ಹೋಲಿಸಲಾಗದ ಶಾಂತ ಮತ್ತು ಸಂಯೋಜನೆ ನಿಜವಾಗಿಯೂ ಪ್ರೇಕ್ಷಕರು ಉತ್ಸಾಹದಿಂದ ಮತ್ತು ಪ್ರಬುದ್ಧರಾಗಿದ್ದಾರೆ. ಅವರ ಪ್ರವಚನವು ಅವರ ನಿಖರತೆ ಮತ್ತು ನುಗ್ಗುವಿಕೆಗೆ ಹೆಸರುವಾಸಿಯಾಗಿದೆ.

RELATED ARTICLES  ಕಾರ್ಕಳ ಮಾಜಿ ಶಾಸಕ ಎಚ್.ಗೋಪಾಲ ಭಂಡಾರಿ ಬಸ್ ಪ್ರಯಾಣದ ವೇಳೆ ಹೃದಯಾಘಾತದಿಂದ ನಿಧನ.

ಭಾರತ ಸರಕಾರ ನೀಡುವ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಗಳ ಮೇಲೆ ನನಗೆ ಅಪಾರ ಗೌರವವಿದೆ. ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಕ್ಕೆ ಧನ್ಯವಾದಗಳು. ಆದರೆ ನಾನೊಬ್ಬ ಸರಳ ವ್ಯಕ್ತಿ. ಸಾಮಾನ್ಯ ಜೀವನ ನಡೆಸುತ್ತ, ಆಧ್ಯಾತ್ಮಿಕ ಬೋಧನೆಯ ಮೂಲಕ ಜನರ ಜೀವನ ಉದಾತ್ತಗೊಳಿಸುವುದು ಉದ್ದೇಶ ನನ್ನದು. ಹಾಗಾಗಿ ಪ್ರಶಸ್ತಿಗಳ ಅವಶ್ಯತೆಯು ನನಗಿಲ್ಲ. ಎಲ್ಲ ಗೌರವಾಧರಗಳೊಂದಿಗೆ ಈ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ. ಅನ್ಯಥಾ ಭಾವಿಸದಿರಿ ಎಂದ ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಪದ್ಮಶ್ರೀ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ

ಕರ್ನಾಟಕ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿತ್ತು. ಅದನ್ನೂ ಶ್ರೀಗಳು ಸ್ವೀಕರಿಸಿರಲಿಲ್ಲ. ಹೀಗೆ ತಮಗೆ ಸಂದ ಎಷ್ಟೋ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಅವರು ವಿನಮೃವಾಗಿಯೇ ನಿರಾಕರಿಸಿದ್ದಾರೆ. ಇದಕ್ಕೆ ಕಾರಣವೇನು? ಎಂಬ ಪ್ರಶ್ನೆಗೆ, “ಅವರು ಆಧ್ಯಾತ್ಮ, ಆದರ್ಶ ಮತ್ತು ನೈತಿಕತೆ ಬಗ್ಗೆ ಕೇವಲ ಬೋಧನೆ ಮಾಡುವುದಷ್ಟೇ ಅಲ್ಲ. ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ. ನುಡಿದಂತೆ ನಡೆಯುವ ಮತ್ತು ನಡೆದಂತೆಯೇ ನುಡಿಯುವ ವ್ಯಕ್ತಿತ್ವ ಅವರದು,” ಎಂದು ಸ್ವಾಮೀಜಿಯನ್ನು ಹತ್ತಿರದಿಂದ ಕಂಡಿರುವವರೊಬ್ಬರು ಹೇಳುತ್ತಾರೆ.