ಮುರುಡೇಶ್ವರ ಕಡೆಯಿಂದ ಭಟ್ಕಳದತ್ತ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸೊಂದು ಪಾದಾಚಾರಿಯೋರ್ವರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಂಗ್ರೆ ಮಾವಿನಕಟ್ಟೆ ಸಮೀಪ ನಡೆದಿದೆ. ಮೃತ ವ್ಯಕ್ತಿಯನ್ನು ಹೊನ್ನಪ್ಪ ತಿಮ್ಮಯ್ಯ ನಾಯ್ಕ (66) ಎಂದು ಗುರುತಿಸಲಾಗಿದ್ದು, ಇವರು ಹೆದ್ದಾರಿ ದಾಟುತ್ತಿದ್ದ ಸಂದರ್ಭದಲ್ಲಿ ಅಪಘಡ ಸಂಭವಿಸಿದೆ. ಅಪಘಾತದ ತೀವೃತೆಗೆ ದೇಹ ಛಿದ್ರಗೊಂಡಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.