ಹೊನ್ನಾವರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಆರೊಳ್ಳಿ ಸಮೀಪ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಶುಕ್ರವಾರ ನಡೆದಿದೆ.
ಬೆಂಗಳೂರು ನೋಂದಣಿ ಹೊಂದಿರುವ ಕಾರು ಗೇರುಸೊಪ್ಪಾ ಕಡೆಯಿಂದ ಹೊನ್ನಾವರ ಕಡೆಗೆ ಸಾಗುವಾಗ ತಿರುವಿನಿಂದ ಕೂಡಿರುವ ರಸ್ತೆಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರಲ್ಲಿ ಓರ್ವ ಬಾಲಕನ ಕೈ ಭಾಗಕ್ಕೆ ಗಂಭೀರ ಗಾಯವಾಗಿದೆ. ಉಳಿದವರಿಗೆ ಚಿಕ್ಕಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು.

RELATED ARTICLES  ಶ್ರೀಗಳ ಪ್ರೇರಣೆಯಿಂದ ವಾಲ್ಗಳ್ಳಿ ವಲಯದವರಿಂದ ರಕ್ತದಾನ.