ಕಾಂತಾರ ಸಿನಿಮಾ ಕತೆ ಹೋಲುತ್ತಿದೆ ಉಡುಪಿಯ ಪಡುಹಿತ್ಲು ಬಳಿಯ ಈ ಘಟ‌ನೆ‌. ಅಧಿಕಾರದ ಹಪಹಪಿಯಿಂದ ಪ್ರತ್ಯೇಕ ಟ್ರಸ್ಟ್ ರಚಿಸಿದ ಪ್ರಕಾಶ್ ಶೆಟ್ಟಿ ಬಳಿಕ ಕೋರ್ಟ್ ಮೆಟ್ಟಿಲೇರುತ್ತಾರೆ. ಇದೀಗ ಇವರು ಕುಸಿದುಬಿದ್ದು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯ ಪಡುಬಿದ್ರೆ ತಾಲೂಕಿನ ಪಡುಹಿತ್ಲು ಗ್ರಾಮದಲ್ಲಿ ದೈವಕೋಲದ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ್ದ ವ್ಯಕ್ತಿ ದೈವದ ತಂಬಿಲ ಸೇವೆ ಸಂದರ್ಭದಲ್ಲಿ ಸ್ಥಾನದ ಎದುರೇ ಕುಸಿದುಬಿದ್ದು ಸಾವನ್ನಪ್ಪಿದ್ದು, ಊರ ಜನ ಮೂಕವಿಸ್ಮಿತರಾಗಿದ್ದಾರೆ.

ಪಡುಹಿತ್ಲು ಗ್ರಾಮದಲ್ಲಿ ಜಾರಂದಾಯ ಬಂಟ ದೈವಸ್ಥಾನದಲ್ಲಿ ವರ್ಷಕ್ಕೊಮ್ಮೆ ವಿಜೃಂಭಣೆಯ ನೇಮೋತ್ಸವ ನಡೆಯುತ್ತದೆ. ಈ ನೇಮದಲ್ಲಿ ಸಮಸ್ತ ಊರವರು ಭಾಗಿಯಾಗುತ್ತಾರೆ. ಈ ದೈವಸ್ಥಾನ ನೋಡಿಕೊಳ್ಳಲು ಪಡುಹಿತ್ಲು ಜಾರಂದಾಯ ಬಂಟ ಸೇವಾ ಸಮಿತಿ ಇದೆ. ಈ ಸಮಿತಿಯಲ್ಲಿ ಪ್ರಕಾಶ್ ಶೆಟ್ಟಿ ಅಧ್ಯಕ್ಷರಾಗಿದ್ದರು. ಸಮಿತಿ ಬದಲಾದಾಗ ಪ್ರಕಾಶ್ ಶೆಟ್ಟಿ ಸಹಜವಾಗಿ ಅಧಿಕಾರ ಕಳೆದುಕೊಂಡಿದ್ದಾರೆ.

RELATED ARTICLES  ಪರಿವರ್ತನ ರಥಯಾತ್ರೆ : ಬೃಹತ್‌ ಸಮಾವೇಶಕ್ಕೆ ತಯಾರಿ

ಅಧಿಕಾರದ ಹಪಹಪಿಯಿಂದ ಪ್ರತ್ಯೇಕ ಟ್ರಸ್ಟ್ ರಚಿಸಿದ ಪ್ರಕಾಶ್ ಶೆಟ್ಟಿ, ಇಲ್ಲಿಯ ಬಂಡಾರ ಮನೆಯ ಗುರಿಕಾರರಾದ ಜಯ ಪೂಜಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸುತ್ತಾರೆ. ಹೀಗೆ 9 ಜನರ ಟ್ರಸ್ಟ್ ರಚಿಸಿದ ಪ್ರಕಾಶ್ ಶೆಟ್ಟಿ, ಇದರಲ್ಲಿ ಜಯ ಪೂಜಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸ್ತಾರೆ. ದೈವಸ್ಥಾನ ತಮಗೆ ಸೇರಿದ್ದು ಎಂದು ಹಕ್ಕು ಸ್ಥಾಪಿಸಲು ಯತ್ನಿಸುತ್ತಾರೆ.

ವರ್ಷಂಪ್ರತಿಯಂತೆ ಈ ವರ್ಷ ನೇಮೋತ್ಸವ ನಡೆಸಲು ಜಾರಂದಾಯ ದೈವಸ್ಥಾನ ಸಮಿತಿ ತೀರ್ಮಾನಿಸಿ, ಜನವರಿ 7 ರಂದು ಕೋಲ ನಡೆಸಲು ತೀರ್ಮಾನಿಸುತ್ತದೆ. ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವ ಜಯಪೂಜಾರಿ ಮತ್ತು ಪ್ರಕಾಶ್ ಶೆಟ್ಟಿ‌ ಕೋಲಕ್ಕೆ ತಡೆಯಾಜ್ಞೆ ತರುವಲ್ಲಿ ಯಶಸ್ವಿಯಾಗುತ್ತಾರೆ. ಆಶ್ಚರ್ಯದ ಸಂಗತಿ ಎಂದರೆ ಡಿಸೆಂಬರ್ 23ಕ್ಕೆ ತಡೆಯಾಜ್ಞೆ ತಂದ ಜಯಪೂಜಾರಿ, ಡಿಸೆಂಬರ್ 24 ರಂದು ಹಠಾತ್ ಕುಸಿದು ಬಿದ್ದು ಸಾವನ್ನಪ್ಪುತ್ತಾರೆ.

RELATED ARTICLES  ನಿರಾಶ್ರಿತ ಕನ್ನಡಿಗರ ಶಾಶ್ವತ ಪುನರ್ವಸತಿ: ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು’

ಸಮೀಪದಲ್ಲಿ ನಡೆಯುತ್ತಿದ್ದ ಕೊಡಮಣಿತ್ತಾಯ ದೈವದ ತಂಬಿಲ ಸೇವೆ ಸಂದರ್ಭ ಎಲ್ಲರೆದುರೇ ಸಾವನ್ನಪ್ಪಿದ್ದು ಊರ ಜನ ಮೂಕವಿಸ್ಮಿತರಾಗಿ ನೋಡುತ್ತಾರೆ. ಈ ಪ್ರಕರಣವನ್ನು ಕೈಗೆತ್ತಿಕೊಂಡ ವಕೀಲ ಬಿ.ನಾಗರಾಜ್, ಕೋರ್ಟ್​ನಲ್ಲಿ ವಾದ ಮಂಡಿಸಿ ತಡೆಯಾಜ್ಞೆಯನ್ನು ತೆರವು ಮಾಡುವಲ್ಲಿ ಯಶಸ್ವಿಯಾಗುತ್ತಾರೆ.