ನವದೆಹಲಿ : ಚಳಿಗೆ ದೆಹಲಿ ತತ್ತರಿಸಿ ಹೋಗಿದೆ. ಭಾನುವಾರ (ಜನವರಿ 8) ದೆಹಲಿಯ ಸಫ್ದರ್‍ಜಂಗ್‍ನಲ್ಲಿ ಕನಿಷ್ಠ ತಾಪಮಾನ 1.9 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಜನವರಿ 15ರ ವರೆಗೆ ದೆಹಲಿಯಲ್ಲಿ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ದೆಹಲಿ ಸರ್ಕಾರದ ಸೂಚನೆಯಂತೆ ಶಿಕ್ಷಣ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ.


9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರ್ಯಾಯ ತರಗತಿಗಳು ನಡೆಯಲಿವೆ ಎಂದು ದೆಹಲಿ ಶಿಕ್ಷಣ ನಿರ್ದೇಶನಾಲಯ ತಿಳಿಸಿದೆ.

RELATED ARTICLES  ಯೋಧರನ್ನು ನನ್ನದೇ ಕುಟುಂಬದಂತೆ ಭಾವಿಸುತ್ತೇನೆ ; ಪ್ರಧಾನಿ ನರೇಂದ್ರ ಮೋದಿ


ಭಾನುವಾರ ಬೆಳಗ್ಗೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟವಾದ ಮಂಜು ಆವರಿಸಿರುವುದರಿಂದ ಜನ ತೀವ್ರ ಚಳಿಯಿಂದ ತತ್ತರಿಸಿ ಹೋಗಿದ್ದಾರೆ. ಮನೆಯಿಂದ ಯಾರೂ ಹೊರಬರುತ್ತಿಲ್ಲ. ಪ್ರತಿಕೂಲ ಹವಾಮಾನ ಮತ್ತು ಇತರ ಕಾರ್ಯಾಚರಣೆಯ ಸಮಸ್ಯೆಗಳಿಂದಾಗಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 20 ವಿಮಾನಗಳ ಹಾರಾಟದಲ್ಲಿ ವ್ಯತ್ಯವಾಗಿತ್ತು,
ಅಲ್ಲದೆ, ಮಂಜು ಕವಿದ ವಾತಾವರಣದಿಂದಾಗಿ 42 ರೈಲುಗಳು ಸಂಚಾರದಲ್ಲೂ ವ್ಯತ್ಯಯವಾಗಿದೆ ಎಂದು ಉತ್ತರ ರೈಲ್ವೆ ವಕ್ತಾರರು ತಿಳಿಸಿದ್ದಾರೆ. ಚಳಿ ಹೆಚ್ಚಾಗುತ್ತಲೆ ಇದ್ದು ಇನ್ನು ಎರಡು ದಿನಗಳವರೆಗೆ ಪರಿಸ್ಥಿತಿ ವಿಕೋಪಕ್ಕೆ ತೆರಳುವ ಸಾಧ್ಯತೆ ಇರುವುದರಿಂದ ಜನ ಎಚ್ಚರವಹಿಸಬೇಕು ಎಂದು ಸರ್ಕಾರ ಮನವಿ ಮಾಡಿಕೊಂಡಿದೆ.

RELATED ARTICLES  ಮೈಸೂರು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ ರಾಷ್ಟ್ರಪತಿ ದೌಪದಿ ಮುರ್ಮು.