ಕಾರವಾರ : ಕುಮಟಾ ಭಾಗದಿಂದ ಹೊನ್ನಾವರಕ್ಕೆ ಆಗಮಿಸುತ್ತಿದ್ದ ದಂಪತಿಗಳಿದ್ದ ಸ್ಕೂಟಿಗೆ ಹಿಂಬದಿಯಿಂದ ಕಂಟೇನರ್ ಡಿಕ್ಕಿ ಹೊಡೆದು ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಗೇರುಸೊಪ್ಪಾ ವೃತ್ತದ ಬಳಿ ನಡೆದಿದೆ. ಘಟನೆಯಲ್ಲಿ ಸ್ಕೂಟಿಯಲ್ಲಿದ್ದ ಆಕೆಯ ಗಂಡನಿಗೂ ತೀವ್ರವಾಗಿ ಪೆಟ್ಟಾಗಿದೆ.
ಸಾವಿತ್ರಿ ಭಟ್(64) ಮೃತ ದುರ್ದೈವಿಯಾಗಿದ್ದು ಈಗೆ ನಿವೃತ್ತ ಬಿಎಸ್ಎನ್ಎಲ್ ಉದ್ಯೋಗಿಯಾಗಿದ್ದು, ಗಂಭೀರ ಗಾಯಗೊಂಡ ಈಕೆಯ ಪತಿ ಹೊನ್ನಾವರ ತಾಲ್ಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ದಂಪತಿಯ ಸ್ಕೂಟಿಗೆ ಹಿಂಭಾಗದಿಂದ ಕಂಟೇನರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಮಹಿಳೆಯ ದೇಹ ಛಿದ್ರ ಛಿದ್ರವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.