ಕೋಲ್ಕತ್ತದ ಬಿರ್ಭೂಮ್ ಜಿಲ್ಲೆಯ ಮಯೂರೇಶ್ವರ ಬ್ಲಾಕ್‌ನ ಪ್ರಾಥಮಿಕ ಶಾಲೆಯ ಬಿಸಿ ಊಟದಲ್ಲಿ ಹಾವು ಬಿದ್ದಿದೆ ಎನ್ನಲಾಗಿದ್ದು, ಇದನ್ನು ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಬೇಳೆ ತುಂಬಿದ್ದ ಕಂಟೇನರ್‌ನಲ್ಲಿ ಹಾವು ಇತ್ತು ಎಂದು ಬಿಸಿಯೂಟ ತಯಾರಿಸಿದ ಸಿಬ್ಬಂದಿ ಹೇಳಿದ್ದಾರೆ.
ಮಕ್ಕಳಿಗೆ ವಾಂತಿಯಾಗಿದ್ದು, ತಕ್ಷಣವೇ 30 ಕ್ಕೂ ಹೆಚ್ಚು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧ್ಯಾಹ್ನದ ಬಿಸಿ ಊಟ ಸೇವನೆ ನಂತರ ಮಕ್ಕಳು ಮನೆಗೆ ತೆರಳಿದ್ದಾರೆ. ನಂತರ ಇದ್ದಕ್ಕಿದ್ದಂತೆಯೇ ಅನಾರೋಗ್ಯಕ್ಕೀಡಾಗಿದ್ದು, ವಾಂತಿ ಮಾಡಿದ್ದಾರೆ ಎಂದು ಪೋಷಕರು ದೂರಿದ್ದಾರೆ. ಒಬ್ಬ ವಿದ್ಯಾರ್ಥಿ ಹೊರತುಪಡಿಸಿ ಎಲ್ಲರೂ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪೋಷಕರು ಶಾಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ.