ಬಾಗಲಕೋಟೆ: ‘ಜನರ ಒತ್ತಾಯದ ಮೇರೆಗೆ ಶಿಕಾರಿಪುರ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

‘ತೇರದಾಳ ಕ್ಷೇತ್ರದಿಂದ ಬಿಜೆಪಿ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದು ಸವದಿ ಸ್ಪರ್ಧೆ ಖಚಿತ. ಈಗಾಗಲೆ ಈ ಬಗ್ಗೆ ಚರ್ಚೆ ಆಗಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ. ನಾನು ಶಿಕಾರಿಪುರ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುವ ನಿಟ್ಟಿನಲ್ಲಿ ಹೈಕಮಾಂಡ್ ಮನವೊಲಿಸುತ್ತೇನೆ’ ಎಂದಿದ್ದಾರೆ.

RELATED ARTICLES  ಮತ್ತೊಂದು ರಾಜ್ಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸದಸ್ಯರು ಮೀಸಲಾತಿ ಪಡೆಯುವಂತಿಲ್ಲ: ಸುಪ್ರೀಂ ಆದೇಶ

‘ಎಸಿಬಿ ಸಂಸ್ಥೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಕ್ಷಣೆ ಮಾಡುವ ಸಂಸ್ಥೆಯಾಗಿದೆ. ಐಟಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಅಪಹಾಸ್ಯಕ್ಕೆ ಈಡಾಗುವಂತದ್ದು. ಇನ್ನು ಕೆಲ ಸಚಿವರ ಮನೆ ಮೇಲೆ ಐಟಿ ದಾಳಿಯಾಗುವ ಸಾಧ್ಯತೆ ಇದೆ. ಆ ಭಯದಿಂದ ಸಿದ್ದರಾಮಯ್ಯ ಈ ರೀತಿ ಮಾಡಲು ಮುಂದಾಗುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಪುಟ್ಟಸ್ವಾಮಿಯವರು ಸರ್ಕಾರದ ಹಗರಣಗಳ ದಾಖಲೆ ಬಿಡುಗಡೆ ಮಾಡಲಿದ್ದಾರೆ’ ಎಂದು ತಿಳಿಸಿದ್ದಾರೆ.

RELATED ARTICLES  ಕುಮಟಾ ಹಾಗೂ ಹೊನ್ನಾವರದಲ್ಲಿ ನಾಳೆ ಎಲ್ಲೆಲ್ಲಿ ಕೊರೋನಾ ಲಸಿಕಾಕರಣ...?