ಬೆಂಗಳೂರು: 2019-20 ನೇ ಸಾಲಿನ ಪ್ರಶ್ನೆಪತ್ರಿಕೆಯ ಸ್ವರೂಪ ಮತ್ತು ಕಠಿಣತೆಯ ಮಟ್ಟವನ್ನು ಅನುಸರಿಸಿ 2022-23 ನೇ ಸಾಲಿನ ಎಸ್.ಎಸ್ .ಎಲ್.ಸಿ. ಪರೀಕ್ಷೆಯನ್ನು ನಡೆಸಲಾಗುತ್ತದೆ. ಅದರಂತೆ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲೀಷ್, ತೃತೀಯ ಭಾಷೆ ಹಿಂದಿ, ಕೋರ್ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜವಿಜ್ಞಾನ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಮಂಡಲಿಯಲ್ಲಿ ಸಿದ್ಧಪಡಿಸಲಾಗಿದ್ದು, ಸದರಿ ಮಾದರಿ ಪ್ರಶ್ನೆಪತ್ರಿಕೆಗಳನ್ನು ಮಂಡಲಿಯ ಜಾಲತಾಣ kseah,karnataka.gov.in ರಲ್ಲಿ ಪ್ರಕಟಿಸಲಾಗಿದೆ.
ಮಾದರಿ ಪ್ರಶ್ನೆಪತ್ರಿಕೆಗಳು ಹೊಂದಿರುವ ಸ್ವರೂಪ ಮತ್ತು ಕಠಿಣತೆಯ ಮಟ್ಟವನ್ನು ಮುಂಬರುವ 2023 ರ ಮಾರ್ಚ್/ಏಪ್ರಿಲ್, ಎಸ್.ಎಸ್.ಎಲ್.ಸಿ. ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಒಳಗೊಂಡಿರುತ್ತವೆ. ಆದ್ದರಿಂದ ಈ ಮಾದರಿ ಪ್ರಶ್ನೆಪತ್ರಿಕೆಗಳ ಉಪಯೋಗ ಪಡೆಯುವಂತೆ ಶಾಲಾ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರುಗಳು, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲು ಈ ಮೂಲಕ ತಿಳಿಸಿದ್ದು, ಇನ್ನುಳಿದ ಭಾಷಾ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಮುಂದಿನ ದಿನಗಳಲ್ಲಿ ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲು ಕ್ರಮವಹಿಸಲಾಗುವುದು ಅಂತ ಇದೇ ವೇಳೆ ಪ್ರಕಟಣೆಯಲ್ಲಿ ತಿಳಿಸಿದೆ.