ಶಿರಸಿ: ಕುಮಟಾದಲ್ಲಿ ಆಸ್ಪತ್ರೆ ಮಾಡಲು ತೀರ್ಮಾನಿಸಲಾಗಿದ್ದು, ಆದಷ್ಟು ಬೇಗ ಆದೇಶಿಸಿ ನಾನೇ ಅದಕ್ಕೆ ಅಡಿಗಲ್ಲು ಹಾಕುತ್ತೇನೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾರವಾರದಲ್ಲಿ ವೈದ್ಯಕೀಯ ಕಾಲೇಜು ಈಗಾಗಲೇ ಇದೆ. ಘಟ್ಟದ ಭಾಗದ ಜನರಿಗೆ ಅನುಕೂಲವಾಗುವಂತೆ, ಸಾರಿಗೆ ಸಂಪರ್ಕ ನೋಡಿ, ಜನಾಭಿಪ್ರಾಯದಂತೆ ಕುಮಟಾದಲ್ಲಿ ಆಸ್ಪತ್ರೆ ಮಾಡಲು ತೀರ್ಮಾನಿಸಲಾಗಿದ್ದು, ಆದಷ್ಟು ಬೇಗ ಆದೇಶಿಸಿ ನಾನೇ ಅದಕ್ಕೆ ಅಡಿಗಲ್ಲು ಹಾಕುತ್ತೇನೆ ಎಂದು ಭರವಸೆ ನೀಡಿದರು. ಹೈಕಮಾಂಡ್ ಸೂಚನೆ ನೀಡುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ. ಕೆಲವು ನಿಗಮಗಳ ಅವಧಿ ಮುಗಿದಿವೆ, ಕೆಲವರದ್ದು ಆಗಿಲ್ಲ. ಇವೆಲ್ಲವನ್ನೂ ಪರಿಶೀಲಿಸಿ ಅಧ್ಯಕ್ಷರು, ಸದಸ್ಯರ ನೇಮಕ ಮಾಡುತ್ತೇವೆ ಎಂದು ಸಿಎಂ ತಿಳಿಸಿದರು.