ಯಲ್ಲಾಪುರ : ತಾಲೂಕಿನಲ್ಲಿ ಇಂದು ಬೆಳಗ್ಗೆ ಸಿಮೆಂಟ್ ತುಂಬಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ತಗಲಿ ರಸ್ತೆಯಲ್ಲೇ ಲಾರಿ ಧಹಿಸಿ ಹೋದ ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಮಂಗಳೂರಿಗೆ ಬಾಗಲಕೋಟೆಯಿಂದ ಸಿಮೆಂಟ್ ಸಾಗಿಸುತ್ತಿದ್ದ ಲಾರಿಯ ಬ್ರೇಕ್ ಲೈನರ್ ಸವೆದು ಹೀಟ್ ನಿಂದ ಟಯರ್ ಗೆ ಬೆಂಕಿ ತಗಲಿದೆ ಎನ್ನಲಾಗಿದೆ. ಇನ್ನು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಯುವುದರೊಳಗೆ ಲಾರಿ ಸಂಪೂರ್ಣ ಸುಟ್ಟು ಕರಕಲಾಗಿ ಹೋಗಿದ್ದು ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾದ ಬಗ್ಗೆ ಮಾಹಿತಿ ಲಭ್ಯವಾಗಿದೆ.