ಕಾರವಾರ : ಕಾರವಾರ ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಉಪನ್ಯಾಸಕಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಅನುಷಾ ಶೆಟ್ಟಿ (27) ಹೃದಯಾಘಾತದಿಂದ ಮೃತಪಟ್ಟವರು ಎನ್ನಲಾಗಿದೆ. ಕಳೆದ 6 ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸಿದ್ದ ಅವರು, ಇಂದು ಮನೆಯಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಅವರು ಉಸಿರು ಚೆಲ್ಲಿದ್ದರು ಎನ್ನಲಾಗಿದೆ.

RELATED ARTICLES  ಅವಲೋಕನ ಪುಸ್ತಕಕ್ಕೆ ರಾಘವೇಶ್ವರ ಶ್ರೀಗಳಿಂದ ದಿವ್ಯಾಶೀರ್ವಾದ.