ಕುಮಟಾ:- ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿಯಲ್ಲಿ ಮಹಾತ್ಮಗಾಂಧಿ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಶ್ರೀ ಹೊನ್ನಪ್ಪ ಎನ್ ನಾಯಕ ೭೪ ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. “ದೇಶ ನಮಗೇನು ಮಾಡಿದೆ ಎನ್ನುವುದಕ್ಕಿಂತ ನಾವು ದೇಶಕ್ಕಾಗಿ ಏನು ಮಾಡಿದ್ದೇವೆ,ದೇಶ ನಮ್ಮಿಂದ ಏನನ್ನು ನೀರಿಕ್ಷಿಸುತ್ತದೆ ಎಂಬ ಕಲ್ಪನೆ ನಮ್ಮಲ್ಲಿ ಮೂಡಿ ಕಾಂiÀið ಕೈಗೊಂಡು ಗುರಿ ತಲುಪಿದಾಗ ಮಾತ್ರ ಗಣರಾಜ್ಯೋತ್ಸವದ ಸಾರ್ಥಕತೆ ಸಾಧ್ಯ” ಎಂದರು.
ಮಹಾತ್ಮಗಾಂಧಿ ವಿದ್ಯಾವರ್ಧಕ ಸಂಘದ ಸೆಕ್ರೆಟರಿ ಮೋಹನ ಬಿ ಕೆರೆಮನೆ ಮಾತನಾಡಿ “ನಮ್ಮ ದೇಶದ ಭವ್ಯ ಪರಂಪರೆಯನ್ನು ಸ್ಮರಿಸೋಣ ಪ್ರಜ್ವಲಿಸುತ್ತಿರುವ ಭಾರತದ ಭಾಗವಾಗೋಣ….ನಮ್ಮದು ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ, ಪ್ರಜಾಸತಾತ್ಮಕ ಗಣರಾಜ್ಯವಾಗಿದೆ.” ಎಂದರು.
ಮುಖ್ಯಾಧ್ಯಾಪಕರಾದ ರೋಹಿದಾಸ ಎಸ್ ಗಾಂವಕರ “ಭಾರತವು ಜಗತ್ತಿನಲ್ಲಿಯೇ ಅತೀ ಉತ್ಕೃಷ್ಠ ಲಿಖಿತ ಸಂವಿಧಾನವನ್ನು ಹೊಂದಿದ ದೇಶ” ಎಂದರು. ಪ್ರಾಸ್ತಾವಿಕ ನುಡಿಗಳನ್ನಾಡಿದ ಎನ್.ರಾಮು.ಹಿರೇಗುತ್ತಿ “ವಿದಾರ್ಥಿಗಳು ಉತ್ತಮ ವ್ಯಕ್ತಿತ್ವ ಹೊಂದಿ ಸತ್ಪçಜೆಯಾಗಿ ದೇಶದ ಭವಿಷ್ಯ ರೂಪಿಸುವಂತಾಗಲಿ” ಎಂದರು. ಉದಯ ಕೆಂಚನ್ ವಕೀಲರು ಮಾತನಾಡಿ “ಗಣರಾಜ್ಯೋತ್ಸವದ ಧ್ಯೇಯೋದ್ಧೇಶಗಳನ್ನು,ಆದರ್ಶಗಳನ್ನು ವಿದ್ಯಾರ್ಥಿಗಳಿ ತಮ್ಮಲ್ಲಿ ಅಳವಡಿಸಿಕೊಳ್ಳಬೇಕೆಂದರು”.
ಗಣರಾಜ್ಯೋತ್ಸವದ ಕುರಿತು ಪಾರ್ವತಿ ಕೆಂಚನ್ ಹಿರೇಗುತ್ತಿ ಮಾತನಾಡಿದರು.
ದೈಹಿಕ ಶಿಕ್ಷಕ ನಾಗರಾಜ ನಾಯಕ ಉಸ್ತುವಾರಿಯಲ್ಲಿ ಧ್ವಜವಂದನೆ ಹಾಗೂ ಆಕರ್ಷಕ ಪ್ರಭಾತಪೇರಿ ನಡೆಯಿತು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾಧ ಶ್ರೀಕಾಂತ ನಾಯಕ, ಸದಸ್ಯರಾದ ನಾಗೇಶ ಟಿ ನಾಯಕ, ಪ್ರೇಮಾನಂದ ನಾಯಕ, ಹಿರೇಗುತ್ತಿ ಕಾಲೇಜ್ ಪ್ರಿನ್ಸಿಪಾಲ್ ಅರುಣ ಹೆಗಡೆ, ಶಿಕ್ಷಕರಾದ ವಿಶ್ವನಾಥ ಪಿ ಬೇವಿನಕಟ್ಟಿ, ಬಾಲಚಂದ್ರ ಹೆಗಡೇಕರ್, ಎನ್.ರಾಮು.ಹಿರೇಗುತ್ತಿ, ಮಹಾದೇವ ಗೌಡ, ಬಾಲಚಂದ್ರ ಅಡಿಗೋಣ, ಇಂದಿರಾ ನಾಯಕ, ಜಾನಕಿ.ಎಮ್.ಗೊಂಡ, ಶಿಲ್ಪಾ ನಾಯಕ,ಮದನ ನಾಯಕ, ಕವಿತಾ ಅಂಬಿಗ ಹಾಗೂ ಮಹಾತ್ಮಾಗಾಂದಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ಶಿಕ್ಷಕರಾದ ಸುಮನ್ ಫರ್ನಾಂಡಿಸ್ ವಸಂತಬಾಯಿ, ಹಾಗೂ ಜಯಶ್ರೀ ಪಟಗಾರ, ತನುಜಾ ಹರಿಕಂತ್ರ ಉಪಸ್ಥಿತರಿದ್ದರು.
ಕಾರ್ಯಕ್ರಮವು ನಾಗಶ್ರೀ ಗೌಡ ಸಂಗಡಿಗರ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾಯಿತು. ಎಮ್.ಜಿ ನಾಗಭೂಷಣ ಸರ್ವರನ್ನೂ ಸ್ವಾಗತಿಸಿದರು. ವಿದ್ಯಾರ್ಥಿ ಪ್ರತಿನಿಧಿ ಕಾಂಚಿಕಾ ನಾಯಕ ಕಾರ್ಯಕ್ರಮದ ನಿರೂಪಣೆ ಮಾಡಿದರು. ವಿಜೇತ ಗುನಗಾ ವಂದಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪ್ರಭಾತಪೇರಿ, ಘೋಷಣೆ ನಡೆದವು. ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚಲಾಯಿತು. ಗಣರಾಜ್ಯೋತ್ಸವದ ಸವಿಯನ್ನು ಅನುಭವಿಸಿದರು.