ಶಿರಸಿ : ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಇದೀಗ ಮತ್ತೆ ಕೇಳಿ ಬರುತ್ತಿದ್ದು ಇಂದೂ ಸಹ ಶಿರಸಿಯ ಗಣೇಶ ನಗರದಲ್ಲಿ ಇಂತಹುದೇ ಪ್ರಕರಣ ಒಂದು ವರದಿಯಾಗಿದೆ. ಕಾಲೇಜು ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗೆ ಇಂಗ್ಲಿಷ್ ಮಾಧ್ಯಮ ಅರ್ಥವಾಗದೆ ಈಕೆ ಗೊಂದಲಕ್ಕೆ ಒಳಗಾಗಿದ್ದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ವರದಿಯಾಗಿದೆ.

ಕಾರ್ಕಳದ ಎಸ್ ಡಿ ಎಮ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಕಲಿಯುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡವಳಾಗಿದ್ದಾಳೆ. ಶಿರಸಿಯ ಗಣೇಶ್ ನಗರದಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ.

ಅನುಷಾ 18 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡವಳೆಂದು ತಿಳಿದು ಬಂದಿದೆ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇನ್ಸ್ಪೆಕ್ಟರ್ ಸೀತಾರಾಮ್ ತನಿಖೆ ಕೈಗೊಂಡಿದ್ದಾರೆ. ಪೊಲೀಸ್ ತನಿಖೆ ನಂತರದಲ್ಲಿ ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದು ಬರಬೇಕಿದೆ.

RELATED ARTICLES  ಮಲೆನಾಡ ಪುಣ್ಯಕ್ಷೇತ್ರ: ಮೃಗವಧೆ

ಇದನ್ನೂ ಓದಿ – ಮಾಂಸ ಮಾರಾಟಮಾಡಲು ಬಂದವರು ಜನರಿಗೆ ತಿನ್ನಿಸಿದರು ಬೌ..ಬೌ ಮಾಂಸ..!

ಬಾಲ್ಯದಲ್ಲಿ ಮಕ್ಕಳ ಮಾನಸಿಕ ಆರೋಗ್ಯದ ವ್ಯತ್ಯಾಸವನ್ನು ಪೋಷಕರು ಗಮನಿಸದಿರುವುದು ಮತ್ತು ಅದಕ್ಕೆ ಪೂರಕವಾಗಿ ಸೂಕ್ತ ಚಿಕಿತ್ಸೆ ನೀಡದಿರುವುದು ಆತ್ಮಹತ್ಯೆಗೆ ಪ್ರಮುಖ ಕಾರಣವಾಗಿದೆ. ಶೈಕ್ಷಣಿಕ ಚಟುವಟಿಕೆಯಲ್ಲಿ ಮಕ್ಕಳ ಮೇಲೆ ಪೋಷಕರು, ವಸತಿ ಶಿಕ್ಷಣ ಸಂಸ್ಥೆಗಳು, ಶಾಲಾ ಕಾಲೇಜುಗಳಿಂದ ಒತ್ತಡ ಹೆಚ್ಚುತ್ತಿದೆ.

RELATED ARTICLES  ಕೆಲಸಕ್ಕೆಂದು ಬೆಂಗಳೂರಿಗೆ ಹೊರಟ ಯುವತಿ ನಾಪತ್ತೆ