ಶಿರಸಿ: ಧಾರವಾಡ ಹಾಲು ಒಕ್ಕೂಟದ ಶಿರಸಿ ಉಪಕೇಂದ್ರದಲ್ಲಿ ಒಕ್ಕೂಟದ ಹಾಗೂ ಕಲ್ಯಾಣ ಸಂಘದ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಇವರು ಕಲ್ಯಾಣ ಸಂಘದಿಂದ ಪ್ರತಿ ತಾಲೂಕಿಗೆ ಒಬ್ಬರಂತೆ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಹಾಲು ಉತ್ಪಾದಕ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನದ ಚೆಕ್ ವಿತರಿಸಿದರು.
ನಂತರ ಮಾತನಾಡಿದ ನಿರ್ದೇಶಕರು ಧಾರವಾಡ ಹಾಲು ಒಕ್ಕೂಟದ ಕಲ್ಯಾಣ ಸಂಘದಿಂದ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಹಾಲು ಉತ್ಪಾದಕ ಸದಸ್ಯರ ಮಕ್ಕಳಿಗೆ ಪ್ರತಿ ವರ್ಷ ವಿದ್ಯಾರ್ಥಿ ವೇತನವನ್ನು ಹಾಗೂ ನಿವೃತ್ತ ಸಂಘದ ಸಿಬ್ಬಂದಿಗಳಿಗೆ ಇಡಿಗಂಟು ಹಣವನ್ನು ಹಾಗೂ ಕಲ್ಯಾಣ ಸಂಘದ ಸದಸ್ಯರಿಗೆ ಅಪಘಾತ ವಿಮೆಯನ್ನು ಹಾಗೂ ಹೈನುಗಾರಿಗೆ ಸಂಬಂಧಿಸಿದ ವಿವಿಧ ಪರಿಕರಗಳನ್ನು ಸಬ್ಸಿಡಿಯಲ್ಲಿ ವಿತರಿಸಲಾಗುತ್ತಿದ್ದು ಒಕ್ಕೂಟದ ವ್ಯಾಪ್ತಿಗೆ ಬರುವ ಎಲ್ಲಾ ಹಾಲು ಉತ್ಪಾದಕರು ಕಲ್ಯಾಣ ಸಂಘದ ಸದಸ್ಯತ್ವವನ್ನು ಸ್ವೀಕರಿಸಿ ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಹಾಯಕ ವ್ಯವಸ್ಥಾಪಕ ಡಾ. ಸಂತೋಷ ಹಂಜಗಿ ಹಾಗೂ ಪ್ರವೀಣ, ಮಲ್ಲಿಕಾರ್ಜುನ, ಮಂಜುನಾಥ ಹಾಗೂ ಸಂಘದ ಸಿಬ್ಬಂದಿಗಳು, ಹಾಗೂ ಸದಸ್ಯರು ಫಲಾನುಭವಿಗಳು, ಹಾಜರಿದ್ದರು.