ಬೆಂಗಳೂರು: ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿ ಬಿದ್ದು ಸ್ಥಳದಲ್ಲೇ ತಾಯಿ -ಮಗಳು ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಬ್ಯಾಲದಮರದ ದೊಡ್ಡಿ ಬಳಿ ನಡೆದಿದೆ. ಮಗಳನ್ನು ಶಾಲೆಗೆ ಬಿಡಲು ಕಾರಿನಲ್ಲಿ ಬರುತ್ತಿದ್ದಾಗ ಮಿಕ್ಸರ್ ಲಾರಿ ಅದರ ಬಿದ್ದಿದೆ. ಕನಕಪುರ ರಸ್ತೆ ಮಾರ್ಗವಾಗಿ ಬನ್ನೇರುಘಟ್ಟಕ್ಕೆ ಬರುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ, ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಸ್ವಿಫ್ಟ್ ಕಾರಿನ ಮೇಲೆ ಮಗುಚಿ ಬಿದ್ದಿದೆ.

RELATED ARTICLES  ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಅವಮಾನ ಮಾಡಿರುವ ಹಿನ್ನೆಲೆಯಲ್ಲಿ ಕೈ ಕೈ ಮಿಲಾಯಿಸಿ ಹೊಡೆದಾಟ.


ಇದರಿಂದ ಕಾರಿನಲ್ಲಿದ್ದ ತಾಯಿ ಹಾಗೂ ಮಗಳು ಮೃತಪಟ್ಟಿದ್ದಾರೆ. ಗಾಯತ್ರಿ ಕುಮಾರ್ (47) ಮತ್ತು ಸಮತಾ ಕುಮಾರ್ (16) ಮೃತ ದುದೈವಿಗಳು ಎಂದು ಗುರುತಿಸಲಾಗಿದೆ. ಬನ್ನೇರುಟ್ಟ ಸಮೀಪದ ತಿರುವಿನಲ್ಲಿ ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಕಾರಿನಲ್ಲಿ ಸಿಲುಕಿರುವ ಪತ್ನಿ ಮತ್ತು ಮಗಳನ್ನು ನಾಲ್ಕು ಕ್ರೇನ್​, ಒಂದು ಜೆಸಿಬಿ ನೆರವಿನಿಂದ ಪೊಲೀಸರು ಹೊರತೆಗೆದಿದ್ದಾರೆ. ಸದ್ಯ ಟ್ರಕ್ ಚಾಲಕ ತಲೆಮರೆಸಿಕೊಂಡಿದ್ದು, ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

RELATED ARTICLES  ಮಾತೃ ಹೃದಯದ ನಿಪುಣ ಶಾಸಕಿ “ಶಾರದಮ್ಮ”