ಮುಂಡಗೋಡ: ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿರುವ
ಅಮ್ಮಾಜಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಶವ
ಪತ್ತೆಯಾಗಿದೆ. 50 ವರ್ಷದ ವ್ಯಕ್ತಿಯ ಶವ ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ಬೆರೆ ಕಡೆಯಿಂದ ಬಂದು ರವಿವಾರ ಇಲ್ಲವೇ ಸೋಮವಾರ ಸಂಜೆ ನಡುವಿನ ಅವಧಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದನೋ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಅಮ್ಮಾಜಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎಂದು ಶಂಕಿಸಲಾಗಿದೆ. ಸೋಮವಾರ ಸಂಜೆ ಮೀನಾಗಾರನ ಕಣ್ಣಿಗೆ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಈ ಕುರಿತು ಮುಂಡಗೋಡ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ತುಂಡಾಗಿ ಬಿದ್ದ ವಿದ್ಯುತ್ ತಂತಿ ತಗುಲಿ ಎರಡು ಹಸು ಸಾವು.