ಸಿದ್ದಾಪುರ : ಲಾರಿ-ಬೈಕ್ ನಡುವೆ ಭೀಕರ ರಸ್ತೆ ಅಪಘಾತ
ಸಂಭವಿಸಿದ್ದು, ಬೈಕ್ ಸವಾರ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಅಲೋಕ ಪರಮೇಶ್ವರ ಭಟ್ ಕಲಗದ್ದೆ (30) ಮೃತ ವ್ಯಕ್ತಿ. ಸಿದ್ದಾಪುರ ತಾಲೂಕಿನ ನಾಣಿಕಟ್ಟಾ ಬಳಿ ನಡೆದ ಭೀಕರ ಅಪಘಾತದಲ್ಲಿ ಆತ ಮೃತಪಟ್ಟಿರುವುದಾಗಿ ವರದಿಯಾಗಿದೆ. ನಾಣಿಕಟ್ಟಾ ಬಳಿ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಪ್ರಾಣಪಕ್ಷಿ ಹಾರಿಹೋಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಸೆಲ್ಫೀ ತಂದ ಆಪತ್ತು.