ಕಾರವಾರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್‌ಗೆ ಗುದ್ದಿರುವ ಘಟನೆ ನಡೆದಿದೆ. ನಗರದ ಕೊಡಿಭಾಗದ ಸಾಯಿಕಟ್ಟಾ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಗೆ ತಾಗಿಕೊಂಡಿದ್ದ ಮನೆಯೊಂದರ ಕಾಂಪೌಂಡಿಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಕೋಡಿಭಾಗ ರಸ್ತೆಯಿಂದ ಬರುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯೊಂದರ ಕಾಂಪೌಂಡಿಗೆ ಕಾರು ಡಿಕ್ಕಿಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ಮುಂಭಾಗ ಮತ್ತು ಹಿಂಬಾಗ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಕಾರಿನ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.