ಶಿರಸಿ: ತಾಲೂಕಿನ ಕುಮಟಾ ರಸ್ತೆಯ ಸಿರ್ಸಿಮಕ್ಕಿ ಕ್ರಾಸ್ ಬಳಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ನಡೆದಿದೆ. ಸಿದ್ದಾಪುರ ತಾಲೂಕಿನ ಹೆಗ್ಗರಣಿಯ ಸದಾಶಿವ ಗಣಪತಿ ಗೌಡ ಸ್ಥಳದಲ್ಲಿಯೇ ಮೃತಪಟ್ಟ ದುರ್ದೈವಿಯಾಗಿದ್ದು, ಸಹಸವಾರ ಜಗದೀಶ ಗಣಪತಿ ಗೌಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಈರ್ವರೂ ‘ಶಿರಸಿ ನಮ್ಮ ಹಬ್ಬ’ ನೋಡಿ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.

RELATED ARTICLES  ಭಟ್ಕಳದಲ್ಲಿ ಮಂಕಾಳ ವೈದ್ಯ ಭರ್ಜರಿ ಗೆಲುವು.