ಹೊನ್ನಾವರ : ತಾಲೂಕಿನ ಹಳದೀಪುರ ಸಮೀಪದ ಸುವೃಣಗದ್ದೆ ಬಳಿ ಎರಡು ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದೆ. ವಿದೇಶಿ ಪ್ರವಾಸಿಗರು ಅತಿವೇಗ ಹಾಗೂ
ಅಜಾಗರೂಕತೆಯಿಂದ ಅಡ್ಡಾದಿಡ್ಡಿಯಾಗಿ ಬೈಕ್ ಚಲಾಯಿಸಿಕೊಂಡು ಬಂದು ಸ್ಥಳೀಯರು ಸಂಚರಿಸುತ್ತಿದ್ದ ಬೈಕಗೆ ಡಿಕ್ಕಿ ಹೊಡಿದಿದ್ದಾರೆ. ಬೈಕ್ ನಲ್ಲಿದ್ದ ಸ್ಥಳೀಯರಾದ
ಈರ್ವರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇದಲ್ಲದೇ ವಿದೇಶಿಗರು ಸಂಚರಿಸುತ್ತಿದ್ದ ಬೈಕ್ ಅಪಘಾತದ ತೀವ್ರತೆಗೆ ಹೆದ್ದಾರಿಯಲ್ಲೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಅಪಘಾತದಿಂದ ರೊಚ್ಚಿಗೆದ್ದ ಸ್ಥಳೀಯರು ವಿದೇಶಿ ಬೈಕ್ ಸವಾರರ ಮೇಲೆ ಹಲ್ಲೆ ನಡೆಸಿದ್ದು, ಸ್ಥಳಕ್ಕೆ ಹೊನ್ನಾವರ ಪೊಲೀಸರು ಆಗಮಿಸಿ ಪರಿಸ್ಥಿತಿ ಸಹಜ ಸ್ಥಿತಿಗೆ ತರುವ
ಮೂಲಕ ಸಾರ್ವಜನಿಕರಿಗೆ ತಿಳಿ ಹೇಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.