ಗೋಕರ್ಣ: ನಾನು ಬ್ರಾಹ್ಮಣ ಸಮುದಾಯದ ವಿರೋಧಿಯಲ್ಲ,ನಾನು ಅಂತಹ ಹೇಳಿಕೆ ನೀಡಿಲ್ಲ ಎಂದು ಮಾಜಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೆ ಸ್ಪಷ್ಟನೆ ನೀಡಿದ್ದಾರೆ. ಬ್ರಾಹ್ಮಣ ಸಮುದಾಯದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಹೇಳಿಕೆಯಿಂದ ವಿವಾದ ಭಿಗಿಲೆದ್ದಿದ್ದು, ಇಂದು, ಬುಧವಾರ ಉತ್ತರಕನ್ನಡ ಜಿಲ್ಲೆಯ ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಮೂರನೇ ಹಂತದ ಪಂಚರತ್ನ ರಥಯಾತ್ರೆ ಪ್ರಾರಂಭಿಸುವ ಮುನ್ನ ಗೋಕರ್ಣದಲ್ಲಿರುವ ಶ್ರೀ ಮಹಾಬಲೇಶ್ವರ ಸನ್ನಧಿಗೆ ಆಗಮಿಸಿದ ಸಂದರ್ಭದಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಈ ವೇಳೆ ದೇವಸ್ಥಾನದ ಅರ್ಚಕರು, ನಿಮ್ಮ ಕುಟುಂಬದ ಮೇಲೆ ನಮಗೆ ಅಭಿಮಾನವಿದೆ. ಆದರೆ ನಿಮ್ಮ ಹೇಳಿಕೆಯಿಂದ ನಮಗೆ ಬೇಸರಾವಾಗಿದೆ. ಗೋಕರ್ಣ ಕ್ಷೇತ್ರದಲ್ಲಿ ಈ ಬಗ್ಗೆ ನಿಮ್ಮ ಸ್ಪಷ್ಟೀಕರಣ ತಿಳಿಸಿ ಎಂದು ಹೇಳಿದ್ದಾರೆ.

RELATED ARTICLES  ಬಸ್ ಅಪಘಾತ : ಸ್ವಲ್ಪದರಲ್ಲಿ ತಪ್ಪಿದ ಭಾರೀ ಅನಾಹುತ.

ಗೋಕರ್ಣದಲ್ಲಿರುವ ಶ್ರೀ ಮಹಾಬಲೇಶ್ವರ ದೇವರಿಗೆ ಹಾಗೂ ಮಹಾಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಬ್ರಾಹ್ಮಣ ಸಮುದಾಯದ ವಿರೋಧಿಯಲ್ಲ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿ ಆಗಲು ಸಹಾಯ ಮಾಡಿದ್ದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ಬ್ರಾಹ್ಮಣ ಸಮುದಾಯ ಭವನಕ್ಕೆ ಜಾಗ ಮಂಜೂರು ಮಾಡಿಕೊಟ್ಟಿದ್ದೆ. ಜೊತೆಗೆ ನನ್ನ ಅವಧಿಯಲ್ಲಿ ಬ್ರಾಹ್ಮಣ ಪ್ರಾಧಿಕಾರವನ್ನೂ ರಚನೆ ಮಾಡಲಾಗಿತ್ತು ಎಂದು ಹೇಳಿದರು.

RELATED ARTICLES  ನಗರೀಕರಣದಿಂದ ಮಕ್ಕಳ ಬಾಲ್ಯ ಜೀವನದ ಮೌಲ್ಯಕ್ಕೆ ಆಘಾತ ತಂದಿದೆ : ಪ್ರಕಾಶ ನಾಯಕ

ಸರ್ವೆ ಜನಃ ಸುಖಿನೋ ಭವಂತು ಎನ್ನುವ ಬ್ರಾಹ್ಮಣ ಸಮುದಾಯದ ಧ್ಯೇಯ ನಮಗೆ ಬೇಕೇ ಹೊರತು ಸಾವರ್ಕರ್‌ ಸಂಸ್ಕೃತಿ ಅಲ್ಲ, ಬ್ರಾಹ್ಮಣ ಸಮುದಾಯದ ಬಗ್ಗೆ ನಮಗೆ ಅಪಾರ ಗೌರವವಿದೆ ಎಂದು ಹೇಳಿದರು. ಹಿಂದೂ ಧರ್ಮವನ್ನು ನಾವು ರಕ್ಷಣೆ ಮಾಡುತ್ತೇವೆ ಎಂದು ಹಿಂದೂಗಳ ಹೆಸರಲ್ಲಿ ಅಧಿಕಾರಕ್ಕೆ ಬಂದು ಬಿಜೆಪಿಯವರು ಏನು ಮಾಡಿದ್ದಾರೆ ಎಂಬುದು ಗೊತ್ತಿದೆ. ಬ್ರಾಹ್ಮಣ ಸಮುದಾಯಕ್ಕೆ ಬಿಜೆಪಿ ಏನು ಮಾಡಿದೆ ಹೇಳಲಿ ಎಂದು ಪ್ರಶ್ನಿಸಿದರು.