ಕುಮಟಾ : ತ್ರಿಶಾ ಕ್ಲಾಸಸ್ ನವರು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ ರಾಜ್ಯಮಟ್ಟದ ತ್ರಿಶಾ ಸ್ಕಾಲರ್ ಶಿಪ್ ಟೆಸ್ಟ್ನಲ್ಲಿ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸರಸ್ವತಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ೩ ವಿದ್ಯಾರ್ಥಿಗಳಾದ ರೋಶನಿ ನಾಯ್ಕ, ಶರಧಿ ಆರ್. ದಿವಾನ, ಅಂಗದ್ ಶ್ಯಾನ್‌ಭಾಗ ಆಯ್ಕೆಯಾಗಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಇವರ ಅತ್ಯುತ್ತಮ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.