ಯಲ್ಲಾಪುರ: ತಾಲೂಕಿನ ಬಿಸಗೋಡ್ ಗಸ್ತಿನ, ಆನಗೋಡದಿಂದ ಸಾವಗದ್ದೆಗೆ ಹೋಗುವ ರಸ್ತೆಯ ಬಲಬದಿಯಲ್ಲಿ ಬುಧವಾರ ಅಸಹಜವಾಗಿ ಹೆಣ್ಣು ಚಿರತೆಯೊಂದು ಮೃತ ಪಟ್ಟಿದ್ದು, ಮಾಹಿತಿ ಬಂದ ತಕ್ಷಣ ಉಪ ಅರಣ್ಯ ಸಂರಕ್ಷಣಾಧಿಕಾರಿ, ಎಸ್.ಜಿ.ಹೆಗಡೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆನಂದ ಹೆಚ್.ಎ ವಲಯ ಅರಣ್ಯಾಧಿಕಾರಿ ಎಲ್.ಎ ಮಠ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

RELATED ARTICLES  ಇಂದಿನ ನಿಮ್ಮ ದಿನ ಭವಿಷ್ಯ ಹೇಗಿದೆ?ಯಾವ ರಾಶಿಯವರಿಗೆ ಏನು ಫಲ? ಅದೃಷ್ಟ ಸಂಖ್ಯೆ ಯಾವುದು? ದಿನಾಂಕ 30/09/2018 ರ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ …

ನಿಯಮಾನುಸಾರ ಸದರಿ ಚಿರತೆಯ ಕಳೆ ಬರಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಶು ಆಸ್ಪತ್ರೆ ಯಲ್ಲಾಪುರಕ್ಕೆ ತರಲಾಯಿತು. ಅಸಹಜ ಚಿರತೆಯ ಸಾವಿಗೆ1972 ವನ್ಯ ಜೀವಿ ಸಂರಕ್ಷಣಾ ಕಾಯಿದೆಯಡಿ ವಲಯ ಅರಣ್ಯಾಧಿಕಾರಿ ನ್ಯಾಯಿಕ ದಂಡಾಧಿಕಾರಿಗಳು ಹಾಗೂ ನ್ಯಾಯಾಧೀಶರು ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ ಫೀರ್ಯಾಧಿ ಸಲ್ಲಿಸಿರುತ್ತಾರೆ. ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಯಲ್ಲಾಪುರರವರ ಮಾರ್ಗದರ್ಶನದಲ್ಲಿ ಅಧಿಕಾರಿಗಳು ಹೆಚ್ಚಿನ ತನಿಖೆ ಕೈ ಗೊಂಡಿದ್ದಾರೆ.

RELATED ARTICLES  ಕಾಮನ್ ವೆಲ್ತ್ ಗೇಮ್ಸ್‌ನಲ್ಲಿ ಭಾರತಕ್ಕೆ 21 ನೇ ಚಿನ್ನ.