ಕಾರವಾರ: ಕಾರವಾರದ ಜಿಲ್ಲಾ ಪತ್ರಿಕಾ ಭವನದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಒರಿಸ್ಸಾ ನೋಂದಣಿಯ ಕಾರು ಗೋವಾ ಕಡೆಯಿಂದ ಅಂಕೋಲಾ ಕಡೆಗೆ ತೆರಳುತ್ತಿರುವಾಗ ಪತ್ರಿಕಾ ಭವನದ ತಿರುವಿನ ಬಳಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದ್ದಲ್ಲದೆ ಸವಾರನು ಸುಮಾರು ಹತ್ತು ಮೀಟರ್ ದೂರಕ್ಕೆ ಬಿದ್ದಿದ್ದಾನೆ. ಗಾಯಗೊಂಡ ಸ್ಕೂಟರ್ ಸವಾರನನ್ನು ಹೊನ್ನಾವರ ಮೂಲದ ಸೋಮಶೇಖರ ನಾಯ್ಕ ಎಂದು ಗುರುತಿಸಲಾಗಿದೆ. ಹೆಲ್ಮಟ್ ಇದ್ದರೂ ಸರಿಯಾಗಿ ಧರಿಸದ ಕಾರಣ ತಲೆಗೆ ಗಂಭೀರ ಸ್ವರೂಪದ ಪೆಟ್ಟಾಗಿದ್ದು, ತಕ್ಷಣ ಸ್ಥಳೀಯರು ಆಂಬ್ಯುಲೆನ್ಸ್ ಗೆ ಕರೆ ಮಾಡಿ ಗಾಯಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯ ತಿಥಿ ಇಂದು ಈ ಮಹಾನ್ ನಾಯಕನಿಗೊಂದು‌ ನಮನ ಸಲ್ಲಿಸೋಣ