ಹೊನ್ನಾವರ : ಹಿರೇಗುತ್ತಿಯಿಂದ ಸಂಶಿಗೆ ನಿಶ್ಚಿತಾರ್ಥ ಕಾರ್ಯ ಮುಗಿಸಿ ವಾಪಸ್ಸು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಟೆಂಪೋ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾಗೋಡ್ ತೆಂಗಾರ ಸಮೀಪ ನಡೆದಿದೆ. ಟೆಂಪೊ ಕ್ಲೀನರ್ ಆಗಿದ್ದ ಹಳದೀಪುರ ಬಡ್ನಕೇರಿಯ ಮಂಜುನಾಥ ಮುಕ್ರಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ವಾಹನದಲ್ಲಿದ್ದ 20ಕ್ಕೂ ಅಧಿಕ ಜನರಿಗೆ ಚಿಕ್ಕಪುಟ್ಟ ಗಾಯವಾಗಿದ್ದು, ಪ್ರಾಣಾಪಯದಿಂದ ಪಾರಾಗಿದ್ದಾರೆ. ಗಾಯಾಳುಗಳಿಗೆ ಸ್ಥಳಿಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.