ಅಂಕೋಲಾ: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಹುಲ್ಲಿನ ಗುಡಿಸಲು ಹೊತ್ತಿ ಉರಿದ ಘಟನೆ ನಡೆದಿದೆ. ತಾಲೂಕಿನ ಡೋಂಗ್ರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗರಣಿ ಗ್ರಾಮದ ಮಹದೇವ ಗೌಡ ಎಂಬುವವರಿಗೆ ಸೇರಿದ್ದ ಮನೆ ಇದಾಗಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಗುಡಿಸಲು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಸ್ಥಳೀಯರು ಹರಸಾಹಸಪಟ್ಟಿದ್ದು,ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.