ಕುಮಟಾ; ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ 2021 ನೇ ಸಾಲಿನ ಕೆ. ವಾಸುದೇವಾಚಾರ್ ದತ್ತಿನಿಧಿ ಪುರಸ್ಕಾರ ಡಾ. ಶ್ರೀಧರ ಗೌಡ ಉಪ್ಪಿನಗಣಪತಿ ರವರ ಹಾಲಕ್ಕಿ ರಾಕು ಕಥಾಸಂಕಲನಕ್ಕೆ ಲಭಿಸಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 12 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿರುವ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ನಡೆಯಲಿದೆ. ಹಾಲಕ್ಕಿ ರಾಕು ಕಥಾಸಂಕಲನವು ವಿಶೇಷವಾಗಿ ಹಾಲಕ್ಕಿ ಭಾಷೆ, ಸಂಸ್ಕೃತಿ ಮೇಲೆ ಬೆಳಕು ಚೆಲ್ಲುವ ಪ್ರಾದೇಶಿಕ ನೆಲೆಯಲ್ಲಿ ಮೂಡಿ ಬಂದಿರುವ ಕೃತಿಯಾಗಿದೆ.