ಶಿರಸಿ: ನಗರದ ಪಂಡಿತ್ ಸಾರ್ವಜನಿಕ ಆಸ್ಪತ್ರೆಯ ಹೊಸಕಟ್ಟಡದ ನೆಲಮಾಳಿಗೆಯಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ತಮ್ಮ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ.